ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ | 10,000 ದಾಟಿದ ಸೋಂಕಿತರ ಸಂಖ್ಯೆ

Last Updated 22 ಆಗಸ್ಟ್ 2020, 16:11 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಶನಿವಾರ 348 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 10,000 ಗಡಿ ದಾಟಿದೆ.

ಸೋಂಕಿತರಲ್ಲಿ 177 ಮಹಿಳೆಯರು, 169 ಪುರುಷರಿದ್ದು, ಉಡುಪಿಯ 165, ಕುಂದಾಪುರದ 132, ಕಾರ್ಕಳದ 46 ಹಾಗೂ ಬೇರೆ ಜಿಲ್ಲೆಗಳ ಐವರು ಇದ್ದಾರೆ.

ಪ್ರಾಥಮಿಕ ಸಂಪರ್ಕದಿಂದ 178, ಶೀತಜ್ವರ ಲಕ್ಷಣಗಳಿದ್ದ 42, ತೀವ್ರ ಉಸಿರಾಟದ ಸಮಸ್ಯೆ ಇದ್ದ ಹಾಗೂ ಅಂತರ ಜಿಲ್ಲೆ ಪ್ರಯಾಣ ಮಾಡಿದ್ದ ತಲಾ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. 124 ಜನರ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.

74 ಸೋಂಕಿತರಲ್ಲಿ ರೋಗ ಲಕ್ಷಣಗಳಿದ್ದರೆ, 274 ಮಂದಿಯಲ್ಲಿ ಲಕ್ಷಣಗಳು ಕಾಣಿಸಿಕೊಂಡಿಲ್ಲ. 96 ರೋಗಿಗಳನ್ನು ಕೋವಿಡ್‌ ಆಸ್ಪತ್ರೆ ಹಾಗೂ ಆರೈಕೆ ಕೇಂದ್ರಗಳಿಗೆ ದಾಖಲಿಸಿದ್ದು, 252 ಸೋಂಕಿತರು ಹೋಂ ಐಸೊಲೇಷನ್‌ನಲ್ಲಿದ್ದಾರೆ.

1,158 ಮಾದರಿ ಸಂಗ್ರಹ:ಪ್ರಾಥಮಿಕ ಸಂಪರ್ಕಕ್ಕೆ ಬಂದ ಹಾಗೂ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ 1158 ಶಂಕಿತರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

235 ಗುಣಮುಖ:ಶನಿವಾರ 235 ರೋಗಿಗಳು ಗುಣಮುಖರಾಗಿದ್ದು, ಇದುವರೆಗೂ ಗುಣರಾದವರ ಸಂಖ್ಯೆ 7,092ಕ್ಕೇರಿದೆ. ಜಿಲ್ಲೆಯಲ್ಲಿ 2,842 ಸಕ್ರಿಯ ಪ್ರಕರಣಗಳು ಇವೆ. ಒಟ್ಟು ಸೋಂಕಿತ ಪ್ರಕರಣಗಳು 10,016 ಇವೆ. 82 ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT