ಭಾನುವಾರ, ಜೂಲೈ 12, 2020
22 °C
ಸೋಂಕಿತರ ಸಂಖ್ಯೆ 472ಕ್ಕೇರಿಕೆ

ಉಡುಪಿ: 62 ಮಂದಿಯಲ್ಲಿ ಕೋವಿಡ್‌ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಬುಧವಾರ 62 ಮಂದಿಯಲ್ಲಿ ಕೋವಿಡ್‌–19 ಸೋಂಕು ದೃಢಪಟ್ಟಿದೆ. ಸೋಂಕಿತರೆಲ್ಲರೂ ಮಹಾರಾಷ್ಟ್ರದಿಂದ ಬಂದವರಾಗಿದ್ದು, 43 ಪುರುಷರು, 15 ಮಹಿಳೆಯರು, ನಾಲ್ವರು ಮಕ್ಕಳು ಸೇರಿದ್ದಾರೆ. ಎಲ್ಲರಿಗೂ ಡಾ.ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ಮಾಹಿತಿ ನೀಡಿದರು.

ಸೋಂಕಿತರ ಸಂಖ್ಯೆ 472ಕ್ಕೇರಿಕೆ: ಮಂಗಳವಾರ 150 ಸೋಂಕಿತ ಪ್ರಕರಣಗಳು ಕಾಣಿಸಿಕೊಂಡು ಉಡುಪಿ ರಾಜ್ಯದಲ್ಲೇ ಅತಿ ಹೆಚ್ಚು ಸೋಂಕಿತರು ಇರುವ ಜಿಲ್ಲೆಯಾಗಿತ್ತು. ಬುಧವಾರ 62 ಪ್ರಕರಣಗಳು ಪತ್ತೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದೆ. ಕಲಬುರಗಿಯಲ್ಲಿ ಒಂದೇ ದಿನ 105 ಪ್ರಕರಣಗಳು ಪತ್ತೆಯಾಗಿದ್ದು, ಮೊದಲ ಸ್ಥಾನಕ್ಕೇರಿದೆ. 

ಸದ್ಯ ಉಡುಪಿಯಲ್ಲಿ 408 ಸಕ್ರಿಯ ಪ್ರಕರಣಗಳಿದ್ದು, 63 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. ಬುಧವಾರ 851 ವರದಿಗಳು ನೆಗೆಟಿವ್ ಬಂದಿದ್ದು, 4936 ವರದಿಗಳು ಬರುವುದು ಬಾಕಿ ಇದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು