ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ ನಾಲ್ವರಿಗೆ ಕೊರೊನಾ ಶಂಕಿತ ಲಕ್ಷಣ: ಎಲ್ಲರೂ ವಿದೇಶಗಳಿಂದ ಮರಳಿದ್ದವರು

Last Updated 20 ಮಾರ್ಚ್ 2020, 14:10 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ನಾಲ್ವರಲ್ಲಿ ಕೊರೊನಾ ಶಂಕಿತ ಲಕ್ಷಣಗಳು ಕಾಣಿಸಿಕೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಹರೈನ್‌ ಹಾಗೂ ಸೌದಿಯಿಂದ ಈಚೆಗೆ ಉಡುಪಿಗೆ ಮರಳಿದ್ದ ಇಬ್ಬರು ಮಹಿಳೆಯರು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೌದಿಯಿಂದ ಬಂದಿದ್ದ 32 ವರ್ಷದ ವ್ಯಕ್ತಿಗೆ ಕುಂದಾಪುರದ ಸರ್ಕಾರಿ ಆಸ್ಪತ್ರೆ ಹಾಗೂ ಆಸ್ಟ್ರೇಲಿಯಾದಿಂದ ಬಂದಿರುವ 66 ವರ್ಷದ ವೃದ್ಧರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಲ್ವರ ಗಂಟಲಿನ ದ್ರವವನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಬುಧವಾರ ಹಾಗೂ ಗುರುವಾರ ಕಳುಹಿಸಿದ್ದ 8 ಜನರ ವೈದ್ಯಕೀಯ ವರದಿ ಇನ್ನೂ ಬಂದಿಲ್ಲ ಎಂದು ಡಿಎಚ್‌ಒ ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT