ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: ಭಯ ಬೇಡ, ಎಚ್ಚರವಿರಲಿ

ಆರೋಗ್ಯ ಇಲಾಖೆಯ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್
Last Updated 31 ಜನವರಿ 2020, 15:00 IST
ಅಕ್ಷರ ಗಾತ್ರ

ಉಡುಪಿ:ಕೊರೊನಾ ವೈರಸ್ ಬಗ್ಗೆ ಭಯ ಪಡುವ ಅಗತ್ಯವಿಲ್ಲ. ರೋಗದ ಲಕ್ಷಣ ತಿಳಿದು ಎಚ್ಚರದಿಂದಿರಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕರ್ನಾಟಕದಲ್ಲಿ ಕೊರೊನಾ ವೈರಸ್ ಪತ್ತೆಯಾಗಿಲ್ಲ. ಆದರೆ, ನೆರೆಯ ಕೇರಳದಲ್ಲಿ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಕೊರೊನಾ ವೈರಸ್‌ನ ಲಕ್ಷಣಗಳು ಮತ್ತು ರೋಗ ಹರಡದಂತೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಿಲ್ಲೆಯಾದ್ಯಂತ ವ್ಯಾಪಕ ಅರಿವು ಮೂಡಿಸಲು ಪೋಸ್ಟರ್‌ಗಳನ್ನು ಮುದ್ರಿಸಿ ವಿತರಿಸಬೇಕು. ಗ್ರಾಮ ಪಂಚಾಯಿತಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅರಿವು ಕಾರ್ಯಕ್ರಮ ಆಯೋಜಿಸಬೇಕು ಎಂದು ಸೂಚಿಸಿದರು.

ವಿದೇಶಗಳಿಂದ ಅದರಲ್ಲೂ ಚೀನಾದಿಂದ ಬರುವವರಿಗೆ ಸೂಕ್ತ ವೈದ್ಯಕೀಯ ಪರೀಕ್ಷೆ ಮಾಡಿಸಿ ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಿದರು.

ಕೊರೊನಾ ವೈರಸ್ ಹರಡುವುದನ್ನು ತಡೆಯುವ ತುರ್ತು ಕಾರ್ಯಪಡೆ ರಚಿಸುವಂತೆ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ತುರ್ತು ಕಾರ್ಯಪಡೆ ರಚಿಸಲಾಗುತ್ತಿದೆ. ಮಣಿಪಾಲ ಆಸ್ಪತ್ರೆಯ ವೈದ್ಯರು, ಖಾಸಗಿ ವೈದ್ಯಕೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ರೋಗವಾಹಕ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಆರ್‌ಸಿಎಚ್ ಅಧಿಕಾರಿ ಡಾ. ಎಂ.ಜಿ.ರಾಮ, ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಡಿಡಿಪಿಐ ಶೇಷಶಯನ ಕಾರಿಂಜ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT