ಗುರುವಾರ , ಜುಲೈ 29, 2021
21 °C

ಕೋವಿಡ್‌ಗೆ ಮತ್ತೊಂದು ಬಲಿ: ಮುಂಬೈನಿಂದ ಬಂದಿದ್ದ ಸೋಂಕಿತ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಕುಂದಾಪುರ ತಾಲ್ಲೂಕಿನ ತೆಕ್ಕಟ್ಟೆಯಲ್ಲಿ ಗುರುವಾರ ಕೋವಿಡ್ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ.

ಗುರುವಾರ ಮಧ್ಯಾಹ್ನ ಮುಂಬೈನಿಂದ 54 ವರ್ಷದ ವ್ಯಕ್ತಿ ಮೂವರು ಕುಟುಂಬದ ಸದಸ್ಯರೊಂದಿಗೆ ಜಿಲ್ಲೆಗೆ ಬಂದಿದ್ದರು. ಎಲ್ಲರ ಆರೋಗ್ಯ ತಪಾಸಣೆ ನಡೆಸಿ ಹೋಂ ಕ್ವಾರಂಟೈನ್‌ಗೆ ಕಳುಹಿಸಲಾಗಿತ್ತು. ಸಂಜೆ 5 ಗಂಟೆಗೆ ವ್ಯಕ್ತಿ ದಿಢೀರ್ ಸಾವನ್ನಪ್ಪಿದ್ದಾರೆ. ಮೃತರ ಗಂಟಲ ದ್ರವದ ಪರೀಕ್ಷಾ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು.

ಮರಣೋತ್ತರ ಪರೀಕ್ಷಾ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಮೃತ ಸೋಂಕಿತ ವ್ಯಕ್ತಿಯ ಕುಟುಂಬ ಸದಸ್ಯರ ಗಂಟಲ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.  ಅವರು ವಾಸವಿರುವ ಮನೆಯನ್ನು ಸೀಲ್‌ಡೌನ್ ಮಾಡಲಾಗಿದ್ದು, ಕಂಟೈನ್‌ಮೆಂಟ್‌ ಪ್ರದೇಶವನ್ನಾಗಿ ಮಾಡಲಾಗಿದೆ. ಸೋಂಕಿತರ ಮನೆಯ ಅಕ್ಕಪಕ್ಕದರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು, ರೋಗದ ಲಕ್ಷಣಗಳು ಕಂಡುಬಂದರೆ, ತಕ್ಷಣ ಪರೀಕ್ಷೆಗೊಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕೋವಿಡ್‌ ಸೋಂಕಿಗೆ ಇದುವರೆಗೂ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ವಿವರ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು