ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಒಂದೇ ದಿನ 204 ಕೋವಿಡ್‌-19 ಪ್ರಕರಣ, ಜನರಲ್ಲಿ ಹೆಚ್ಚಿದ ಆತಂಕ

Last Updated 5 ಜೂನ್ 2020, 13:53 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ 204 ಜನರಲ್ಲಿ ಕೋವಿಡ್‌–19 ಸೋಂಕು ದೃಢಪಟ್ಟಿದೆ. ಸೋಂಕಿತರಲ್ಲಿ 203 ಮಂದಿ ಮುಂಬೈ ಸಂಪರ್ಕ ಹೊಂದಿದ್ದು, ಚೆಕ್‌ಪೋಸ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಸೋಂಕು ತಗುಲಿದೆ.

ಸೋಂಕಿತರಲ್ಲಿ 157 ಪುರುಷರು, 40 ಮಹಿಳೆಯರು ಹಾಗೂ 7 ಮಕ್ಕಳು ಇದ್ದು, ಎಲ್ಲರಿಗೂ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದೇ ದಿನ 2,000ಕ್ಕಿಂತ ಹೆಚ್ಚು ಮಾದರಿಗಳ ಪರೀಕ್ಷಾ ವರದಿ ಬಂದಿರುವುದರಿಂದ ಸೋಂಕಿತ ಪ್ರಕರಣಗಳು ಹೆಚ್ಚಾಗಿವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು.

ಹೊರ ರಾಜ್ಯಗಳಿಂದ ಜಿಲ್ಲೆಗೆ ಬಂದಿದ್ದ 8,500 ಮಂದಿಯ ಪರೀಕ್ಷೆ ಶುಕ್ರವಾರಕ್ಕೆ ಮುಗಿಯಲಿದ್ದು, ಮುಂದೆ ಸೋಂಕಿತರ ಸಂಖ್ಯೆ ಕಡಿಮೆಯಾಗಲಿದೆ. ಐಎಲ್‌ಐ ಹಾಗೂ ಎಸ್‌ಎಆರ್‌ಐ ಪ್ರಕರಣಗಳ ಮೇಲೆ ನಿಗಾ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸೋಂಕಿತರ ಸಂಖ್ಯೆ 768ಕ್ಕೆ ಏರಿಕೆ

ರಾಜ್ಯದಲ್ಲೇ ಅತಿ ಹೆಚ್ಚು ಸೋಂಕಿತರು ಇರುವ ಜಿಲ್ಲೆಗಳಲ್ಲಿ ಉಡುಪಿ ಮೊದಲ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 768ಕ್ಕೆ ಏರಿಕೆಯಾಗಿದ್ದು, 685 ಕ್ರಿಯಾಶೀಲ ಪ್ರಕರಣಗಳಿವೆ. 82 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT