ಉಡುಪಿ: ತಂದೆಗೆ ದೈಹಿಕ, ಮಾನಸಿಕ ಕಿರುಕುಳ ನೀಡದಂತೆ ಹಾಗೂ ಅವರ ಮನೆಯಲ್ಲಿ ವಾಸಿಸಲು ಅನುವು ಮಾಡಿಕೊಂಡುವಂತೆ ಕುಂದಾಪುರ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಚೈತ್ರಾ ಕುಂದಾಪುರ ಅವರಿಗೆ ನಿರ್ದೇಶಿಸಿದೆ.

ಚೈತ್ರಾ ತಂದೆ 71 ವರ್ಷದ ಬಾಲಕೃಷ್ಣ ನಾಯ್ಕ ಅವರು, ಪೋಷಕರು ಮತ್ತು ಹಿರಿಯ ನಾಗರಿಕರ ಪಾಲನೆ ಹಾಗೂ ಕಲ್ಯಾಣ ಕಾಯ್ದೆ 2007ರ ಅಡಿ ಪರಿಹಾರ ಕೋರಿ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದರು.

ದೂರು ಪುರಸ್ಕರಿಸಿ ವಾದ ಪ್ರತಿವಾದ ಆಲಿಸಿದ ಕುಂದಾಪುರ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಅವರು ಈ ಆದೇಶ ನೀಡಿದ್ದಾರೆ.

ಬಾಲಕೃಷ್ಣ ನಾಯ್ಕ ಅವರ ಜೀವ ಮತ್ತು ಸೊತ್ತಿಗೆ ರಕ್ಷಣೆ ನೀಡಲು ನಿಯಮಾನುಸಾರ ಕ್ರಮ ಕೈಗೊಳ್ಳಬೇಕೆಂದು ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ಗೆ ಕೋರ್ಟ್ ಸೂಚನೆ ನೀಡಿದೆ.

ಪತ್ನಿ ಹಾಗೂ ಮಗಳು ಚೈತ್ರಾ ಸೇರಿಕೊಂಡು ಮನೆಯ ದಾಖಲೆಗಳನ್ನು ಅವರ ಹೆಸರಿಗೆ ವರ್ಗಾಯಿಸುವಂತೆ ಒತ್ತಡ ಹೇರಿದ್ದು, ಅದನ್ನು ನಿರಾಕರಿಸಿದ ಕಾರಣ ಕೊಲೆ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಬಾಲಕೃಷ್ಣ ನಾಯ್ಕ ಅವರು ತಿಳಿಸಿದ್ದರು.

ಈ ಕಾರಣಕ್ಕೆ ಮಂಗಳೂರಿನ ಹೊಟೇಲ್ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದು, ಹಿರಿಯ ಮಗಳನ್ನು ಭೇಟಿಯಾಗಲು ಆಗಾಗ ಊರಿಗೆ ಬರುತ್ತಿದ್ದೆ. ಸದ್ಯ ಚೈತ್ರಾ ಹಾಗೂ ಆಕೆಯ ತಾಯಿ ಸ್ವಂತ ಮನೆಗೆ ಪ್ರವೇಶಿಸಲು ಬಿಡದೆ, ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದೂ ಅವರು ದೂರಿನಲ್ಲಿ ಹೇಳಿದ್ದರು.

ಬಾಲಕೃಷ್ಣ ನಾಯ್ಕ ಅವರ ಪರ ವಕೀಲ ಕೆ.ಸಿ. ಶೆಟ್ಟಿ ಕುಂದಾಪುರ ವಾದಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.