ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಕೊಲ್ಲೂರು ದೇವಸ್ಥಾನದಲ್ಲಿ ಆಧಾರ್ ಕಡ್ಡಾಯ

Last Updated 4 ಸೆಪ್ಟೆಂಬರ್ 2021, 12:51 IST
ಅಕ್ಷರ ಗಾತ್ರ

ಉಡುಪಿ: ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿನೀಡುವ ಭಕ್ತರಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡಲಾಗಿದೆ. ಕೇರಳ ಹಾಗೂ ಮಹಾರಾಷ್ಟ್ರದ ಭಕ್ತರನ್ನು ಗುರುತಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಎಸ್‌ಪಿಬಿ ಮಹೇಶ್ ತಿಳಿಸಿದ್ದಾರೆ.

ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಭಕ್ತರು ಕಡ್ಡಾಯವಾಗಿ 72 ಗಂಟೆ ಮೀರದ ಕೋವಿಡ್‌ ಆರ್‌ಟಿಪಿಸಿಆರ್‌ ನೆಗೆಟಿವ್ ವರದಿ ಸಲ್ಲಿಸಬೇಕು. ವರದಿ ಇಲ್ಲದ ಭಕ್ತರಿಗೆ ಸ್ಥಳದಲ್ಲೇ ಕೋವಿಡ್ ಪರೀಕ್ಷೆಗೊಳಪಡಿಸಿ, 7 ದಿನ ಕ್ವಾರಂಟೈನ್‌ ಕೇಂದ್ರದಲ್ಲಿ ಇರಿಸಲಾಗುವುದು. ಕ್ವಾರಂಟೈನ್ ಅವಧಿ ಮುಗಿದ ಬಳಿಕ ಮತ್ತೊಮ್ಮೆ ಆರ್‌ಟಿಪಿಸಿಆರ್‌ ಪರೀಕ್ಷೆ ನಡೆಸಿ ನೆಗೆಟಿವ್ ಇದ್ದರೆ ಕಳುಹಿಸಲಾಗುವುದು ಎಂದು ಮಾಹಿತಿ ನೀಡಿದರು.

ದೇವಸ್ಥಾನದ ಸಮೀಪದಲ್ಲಿ ಕೋವಿಡ್ ಪರೀಕ್ಷಾ ಕೇಂದ್ರ ಹಾಗೂ ಕೋವಿಡ್‌ ಕೇರ್ ಸೆಂಟರ್ ತೆರೆಯುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಸೂಚನೆ ನೀಡಿದ್ದು,ಸೋಂಕುಹರಡದಂತೆಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮಹೇಶ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT