ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ | 27 ಜನರಲ್ಲಿ ಕೋವಿಡ್–19‌ ಸೋಂಕು: ಬಹುತೇಕ ಪ್ರಕರಣಗಳು ಮುಂಬೈ ಮೂಲ

Last Updated 21 ಮೇ 2020, 8:06 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯ 27 ಮಂದಿಯಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಈಚೆಗೆ 199 ಮಂದಿಯ ಗಂಟಲ‌ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಅವರಲ್ಲಿ 27 ಜನರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ‌. ಸೋಂಕಿತರಲ್ಲಿ ಇಬ್ಬರು ಕಾರವಾರದ ಕೋವಿಡ್-19‌ ಆಸ್ಪತ್ತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಈಚೆಗೆ ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದಿದ್ದ 23, ತೆಲಂಗಾಣದಿಂದ ಬಂದಿದ್ದ ಮೂವರಲ್ಲಿ ಹಾಗೂ ಕೇರಳದಿಂದ ಬಂದು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಬ್ಬರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.

ಸೋಂಕಿತರಲ್ಲಿ 6 ಪುರುಷರು, ಐವರು ಮಹಿಳೆಯರು, 16 ಮಕ್ಕಳು ಸೇರಿದ್ದಾರೆ. ಎಲ್ಲರೂ ಕ್ವಾರಂಟೈನ್‌ನಲ್ಲಿದ್ದು ಡಾ.ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT