ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಒಂದೇ ದಿನ 653 ಮಾದರಿ ರವಾನೆ

Last Updated 21 ಮೇ 2020, 13:53 IST
ಅಕ್ಷರ ಗಾತ್ರ

ಉಡುಪಿ: ಕೊರೊನಾ ಸೋಂಕಿತ ಲಕ್ಷಣಗಳು ಕಂಡುಬಂದ ಹಾಗೂ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದಿರುವ 653 ಮಂದಿಯ ಗಂಟಲ ದ್ರವವನ್ನು ಆರೋಗ್ಯ ಇಲಾಖೆ ಪರೀಕ್ಷೆಗೆ ಕಳುಹಿಸಿದೆ.

ಇದು ಇದುವರೆಗಿನ ಗರಿಷ್ಠ ಮಾದರಿ ಸಂಗ್ರಹವಾಗಿದ್ದು, ಕೋವಿಡ್‌ ಹಾಟ್‌ಸ್ಪಾಟ್‌ಗಳಿಂದ ಬಂದಿರುವ 567 ಮಂದಿಯ, ತೀವ್ರ ಉಸಿರಾಟದ ಸಮಸ್ಯೆ ಇರುವ 12 ಮಂದಿ, ಸೋಂಕಿತರ ಸಂಪರ್ಕಕ್ಕೆ ಬಂದಿರುವ 64 ಜನರ, 6 ಐಎಲ್‌ಐ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಒಟ್ಟು 1487 ವರದಿಗಳು ಬರುವುದು ಬಾಕಿ ಇದೆ.

ಮತ್ತೊಂದೆಡೆ ಗುರುವಾರ ಆರು ಪುರುಷರು ಹಾಗೂ ನಾಲ್ವರು ಮಹಿಳೆಯರು ಐಸೋಲೇಷನ್‌ ವಾರ್ಡ್‌ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT