ಕೋಟ(ಬ್ರಹ್ಮಾವರ): ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್‌ಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಕೋಟತಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಅವರು ವಾಸವಿದ್ದ ಮನೆ ಹಾಗೂ 100 ಮೀಟರ್ ಪ್ರದೇಶವನ್ನು ಸೋಮವಾರ ಸೀಲ್‌ಡೌನ್ ಮಾಡಲಾಗಿದೆ.

ಕಾನ್‌ಸ್ಟೇಬಲ್‌ಗೆ ಕೊರೊನಾ ಸೋಂಕು ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಕೋಟತಟ್ಟುವಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ಮನೆಯವರ ಗಂಟಲು ದ್ರವದ ಪರೀಕ್ಷೆಯನ್ನು ನಡೆಸಲಾಗಿದ್ದು, ವರದಿ ಇನ್ನಷ್ಟೇ ಬರಬೇಕಾಗಿದೆ.

ಕಾನ್‌ಸ್ಟೇಬಲ್ ವಾಸವಿದ್ದ ಮನೆಯ ಸುತ್ತಮುತ್ತಲಿನ ಪ್ರದೇಶಗಳನ್ನು ಕೋಟ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಸ್ಯಾನಿಟೈಸ್ ಮಾಡಿದ್ದಾರೆ. ಮೂರು ದಿನಗಳಲ್ಲಿ ಕೋಟತಟ್ಟು ವ್ಯಾಪ್ತಿಯಲ್ಲಿ ಎರಡು ಪ್ರಕರಣಗಳು ದಾಖಲಾಗಿರುವ ಕಾರಣ ಸ್ಥಳೀಯರಲ್ಲಿ ಆತಂಕ ಎದುರಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.