ಭಾನುವಾರ, ಮಾರ್ಚ್ 7, 2021
32 °C

ಉಡುಪಿ: 7 ಮಂದಿಗೆ ಕೋವಿಡ್‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಗುರುವಾರ 7 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, ಉಡುಪಿಯ ಇಬ್ಬರು, ಕುಂದಾಪುರದ ಐವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 23241 ಇದ್ದು, ಸಕ್ರಿಯ ಸೋಂಕಿತರು 27 ಮಂದಿ ಇದ್ದಾರೆ.

ಗುರುವಾರ 10 ಮಂದಿ ಸೇರಿ ಇದುವರೆಗೂ 23025 ಸೋಂಕಿತರು ಗುಣಮುಖರಾಗಿದ್ದಾರೆ. 189 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಕೋವಿಡ್‌ ಲಸಿಕೆ:

ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಅಭಿಯಾನ ಮುಂದುವರಿದಿದ್ದು, ಗುರುವಾರ ಲಸಿಕೆ ಹಾಕಿಸಿಕೊಳ್ಳಲು ನೋಂದಣಿ ಮಾಡಿಕೊಂಡಿದ್ದ 1,500 ಮಂದಿಯ ಪೈಕಿ 720 ಮಂದಿಗೆ ಲಸಿಕೆ ಹಾಕಲಾಗಿದೆ. ಒಟ್ಟು 3118 ಜನರ ಲಸಿಕೆಯ ಗುರಿಗೆ ಪ್ರತಿಯಾಗಿ 2159 ಜನರಿಗೆ ಲಸಿಕೆ ಹಾಕಲಾಗಿದ್ದು, ಶೇ 69.2ರಷ್ಟು ಗುರಿ ಸಾಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು