ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಜಿಲ್ಲೆಯಲ್ಲಿ ಸೆ.1ರಿಂದ ಶಾಲೆ ಆರಂಭಿಸಲು ನಿರ್ಧಾರ -ವಿ. ಸುನಿಲ್ ಕುಮಾರ್

Last Updated 30 ಆಗಸ್ಟ್ 2021, 13:21 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್‌ ಪ್ರಮಾಣ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸೆ.1ರಿಂದ ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದರು.

ಕಳೆದ ಮೂರು ದಿನಗಳ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ 1.4ರಷ್ಟಿದೆ. ಹಾಗಾಗಿ, 9 ರಿಂದ 12ನೇ ತರಗತಿಯವರೆಗೂ ಶಾಲೆಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಣಯ ತೆಗೆದುಕೊಂಡಿದೆ. ಶಿಕ್ಷಕರು ಕಡ್ಡಾಯವಾಗಿ ಕೋವಿಡ್‌ ಲಸಿಕೆ ಪಡೆಯಬೇಕು. ಒಂದೂ ಲಸಿಕೆ ಪಡೆಯದ ಶಿಕ್ಷಕರು ಲಸಿಕೆ ಹಾಕಿಸಿಕೊಳ್ಳುವವರೆಗೂ ಕರ್ತವ್ಯಕ್ಕೆ ಹಾಜರಾಗುವಂತಿಲ್ಲ ಎಂದರು.

ರಾಜ್ಯದಲ್ಲಿ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯಬೇಕು ಎಂಬುದು ಎಲ್ಲರ ಆಶಯ. ಆದರೆ, ಜನರ ಆರೋಗ್ಯ ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಕೇಂದ್ರ ಸರ್ಕಾರದ ಕೋವಿಡ್‌ ಮಾರ್ಗಸೂಚಿಗಳಂತೆ ಗಣೇಶ ಹಬ್ಬ ಆಚರಿಸಬೇಕಿದೆ. ಸರ್ಕಾರದ ನಿರ್ಧಾರಕ್ಕೆ ಜನರು ಸಹಕಾರ ನೀಡಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT