ಮಂಗಳವಾರ, ಮೇ 11, 2021
19 °C

ಕೋವಿಡ್‌: ಉಡುಪಿಯ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 101 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಹಲವು ಕಾಯಿಲೆಗಳಿಂದ ಬಳಲುತ್ತಿದ್ದ 59 ವರ್ಷದ ಉಡುಪಿಯ ವ್ಯಕ್ತಿ ಸೋಂಕಿಗೆ ತುತ್ತಾಗಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸೋಂಕಿನಿಂದ ಮೃತರಾದವರ ಸಂಖ್ಯೆ 193ಕ್ಕೆ ಏರಿಕೆಯಾಗಿದೆ.

ಉಡುಪಿಯ 63, ಕುಂದಾಪುರದ 23, ಕಾರ್ಕಳದ 14 ಹಾಗೂ ಬೇರೆ ಜಿಲ್ಲೆಯ ಒಬ್ಬರಿಗೆ ಸೋಂಕು ಖಚಿತವಾಗಿದ್ದು, ಇವರಲ್ಲಿ 42 ಮಹಿಳೆಯರು, 55 ಪುರುಷರಿದ್ದಾರೆ. 41 ಮಂದಿಗೆ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದರೆ, 60 ಸೋಂಕಿತರಲ್ಲಿ ಲಕ್ಷಣಗಳು ಕಂಡುಬಂದಿಲ್ಲ. ಆಸ್ಪತ್ರೆಗಳಲ್ಲಿ 15, ಹೋಂ ಐಸೊಲೇಷನ್‌ನಲ್ಲಿ 86 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 26,470ಕ್ಕೆ ಏರಿಕೆಯಾಗಿದ್ದು, 591 ಸಕ್ರಿಯ ಸೋಂಕಿತರು ಇದ್ದಾರೆ. 25,686 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೂ 1,57,051 ಮಂದಿಗೆ ಕೋವಿಡ್‌ ಮೊದಲ ಡೋಸ್ ಲಸಿಕೆ ಹಾಕಲಾಗಿದ್ದು, 26343 ಮಂದಿಗೆ 2ನೇ ಡೋಸ್‌ ಹಾಕಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.