ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊರ ರಾಜ್ಯಗಳಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ: ಸಚಿವ ಸುಧಾಕರ್

Last Updated 14 ಜುಲೈ 2021, 12:05 IST
ಅಕ್ಷರ ಗಾತ್ರ

ಉಡುಪಿ: ಕೇರಳ ಹಾಗೂ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರುಕಡ್ಡಾಯವಾಗಿಕೋವಿಡ್ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹಾಜರು ಪಡಿಸಬೇಕು ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದರು.

ಬುಧವಾರ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಸ್ಥಳಕ್ಕೆ ಭೇಟಿನೀಡಿ ಮಾತನಾಡಿದ ಸಚಿವರು, ಮೂರನೇ ಅಲೆ ಬಾಧಿಸಬಾರದು ಎಂದರೆ ಸಾರ್ವಜನಿಕರು ಕಡ್ಡಾಯವಾಗಿ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕುಎಂದರು.

ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಗೂಡಿದರೆ, ಜಾತ್ರೆ, ಮದುವೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರಿದರೆ ಮೂರನೇ ಅಲೆಗೆ ಆಹ್ವಾನ ನೀಡಿದಂತಾಗುತ್ತದೆ ಎಂದರು.

ರಾಜ್ಯದಲ್ಲಿ 2.6 ಕೋಟಿ ಮಂದಿಗೆ ಲಸಿಕೆ ಹಾಕಲಾಗಿದ್ದು, 3 ಕೋಟಿ ಲಸಿಕೆ ಹಾಕುವುದು ಬಾಕಿ ಇದೆ. ಎಲ್ಲರಿಗೂ ಲಸಿಕೆ ಹಾಕಿದರೆ ಮೂರನೇ ಅಲೆ ಬಾಧಿಸುವ ಸಾಧ್ಯತೆಗಳು ಕಡಿಮೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT