ಉಡುಪಿ: 89 ಮಂದಿಗೆ ಕೋವಿಡ್ ದೃಢ
ಉಡುಪಿ: ಜಿಲ್ಲೆಯಲ್ಲಿ ಬುಧವಾರ 89 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಉಡುಪಿಯ 40, ಕುಂದಾಪುರದ 38 ಹಾಗೂ ಕಾರ್ಕಳದ 10 ಬೇರೆ ಜಿಲ್ಲೆಯ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರಲ್ಲಿ 43 ಮಹಿಳೆಯರು, 46 ಪುರುಷರು ಇದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 25,720 ಇದ್ದು, ಸಕ್ರಿಯ ಸೋಂಕಿತರ ಸಂಖ್ಯೆ 428 ಇವೆ. ಬುಧವಾರ 59 ಮಂದಿ ಸೇರಿ ಇದುವರೆಗೂ 25100 ಸೋಂಕಿತರು ಗುಣಮುಖರಾಗಿದ್ದಾರೆ. 182 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.