ಶನಿವಾರ, ಜುಲೈ 24, 2021
25 °C
ಕುಂದಾಪುರದ ಸೋಂಕಿತ ಮೃತ ವ್ಯಕ್ತಿಯ ಪತ್ನಿ, ಪುತ್ರಿಗೂ ಸೋಂಕು

ಉಡುಪಿ: 13 ಮಂದಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಶನಿವಾರ 13 ಮಂದಿಯಲ್ಲಿ ಕೋವಿಡ್‌–19 ಸೋಂಕು ದೃಢಪಟ್ಟಿದೆ. 8 ಪುರುಷರು, ಇಬ್ಬರು ಮಹಿಳೆಯರು ಹಾಗೂ 2 ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಸೋಂಕು ತಗುಲಿದೆ.

10 ಜನರಿಗೆ ಮುಂಬೈ ಸಂಪರ್ಕವಿದ್ದು, ಪಿ–5451 ಸೋಂಕಿತನ ಪ್ರಾಥಮಿಕ ಸಂಪರ್ಕದಿಂದ ಒಬ್ಬರಿಗೆ ಹಾಗೂ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದ ಒಬ್ಬರಲ್ಲಿ ಸೋಂಕು ಕಂಡುಬಂದಿದೆ. ಒಬ್ಬ ವ್ಯಕ್ತಿಗೆ ಸೋಂಕು ಹೇಗೆ ತಲುಗಿದೆ ಎಂದು ಪತ್ತೆ ಹಚ್ಚಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪತ್ನಿ, ಪುತ್ರಿಗೂ ಕೋವಿಡ್‌:

ಮಹಾರಾಷ್ಟ್ರದಿಂದ ಕುಂದಾಪುರದ ತೆಕ್ಕಟ್ಟೆಗೆ ಬಂದು ಗುರುವಾರ ಮೃತಪಟ್ಟಿದ್ದ 54 ವರ್ಷದ ವ್ಯಕ್ತಿಯ ಪತ್ನಿ ಹಾಗೂ ಪುತ್ರಿಗೂ ಕೋವಿಡ್ ಸೋಂಕು ತಗುಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಬ್ಬರನ್ನೂ ಕುಂದಾಪುರದ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಸೋಂಕಿತ ವ್ಯಕ್ತಿಯ ಶವದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

73 ಮಾದರಿ ಸಂಗ್ರಹ:

ಶೀತ, ಕೋವಿಡ್‌ ಸೋಂಕಿನ ಲಕ್ಷಣ ಹಾಗೂ ಸೋಂಕಿತರ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿರುವ 73 ಮಂದಿಯ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. 183 ವರದಿ ಬರುವುದು ಬಾಕಿ ಇದೆ.

ಉಸಿರಾಟದ ಸಮಸ್ಯೆ ಕಂಡುಬಂದ ಹಾಗೂ ಶೀತ ಜ್ವದ ಲಕ್ಷಣಗಳಿದ್ದ 15 ಮಂದಿಗೆ ಐಸೊಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,063ಕ್ಕೇರಿಕೆಯಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು