ಸೋಮವಾರ, ಜೂನ್ 14, 2021
22 °C
ಸೋಂಕಿತರ ಸಂಖ್ಯೆ 7,975ಕ್ಕೇರಿಕೆ

ಉಡುಪಿ: 237 ಕೋವಿಡ್ ಪಾಸಿಟಿವ್; 260 ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ 237 ಮಂದಿಗೆ ಭಾನುವಾರ ಕೋವಿಡ್‌–19 ಸೋಂಕು ದೃಢಪಟ್ಟಿದೆ. ಸೋಂಕಿತರಲ್ಲಿ ಉಡುಪಿ ತಾಲ್ಲೂಕಿನ 122, ಕುಂದಾಪುರದ 100 ಹಾಗೂ ಕಾರ್ಕಳದ 14 ಹಾಗೂ ಬೇರೆ ಜಿಲ್ಲೆಯ ಒಬ್ಬರು ಇದ್ದಾರೆ‌.

ಪ್ರಾಥಮಿಕ ಸಂಪರ್ಕದಿಂದ 107 ಹಾಗೂ ಐಎಲ್‌ಐ ಲಕ್ಷಣಗಳಿದ್ದ 45, ಸಾರಿ ಲಕ್ಷಣಗಳಿದ್ದ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. 84 ಜನರ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.

67 ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡರೆ, 170 ಸೋಂಕಿತರಲ್ಲಿ ರೋಗದ ಲಕ್ಷಣಗಳು ಇಲ್ಲ. 121 ಸೋಂಕಿತರಿಗೆ ಕೋವಿಡ್ ಆಸ್ಪತ್ರೆಗಳಲ್ಲಿ 116 ಮಂದಿಗೆ ಹೋಂ ಐಸೊಲೇಷನ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

569 ಮಾದರಿ ಸಂಗ್ರಹ:

ಸೋಂಕಿನ ಲಕ್ಷಣಗಳು ಕಂಡುಬಂದ, ಪ್ರಾಥಮಿಕ ಸಂಪರ್ಕಕ್ಕೆ ಬಂದ 569 ಜನರ ಮಾದರಿಯನ್ನು ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. 

260 ಗುಣಮುಖ:

ಭಾನುವಾರ 260 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 5,361 ಮಂದಿ ಗುಣರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 7,975ಕ್ಕೇರಿಕೆಯಾಗಿದೆ. 77 ಸೋಂಕಿತರು ಮೃತಪಟ್ಟಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು