ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 5,000 ಗಡಿ ದಾಟಿದೆ. ಬುಧವಾರ ಜಿಲ್ಲೆಯಲ್ಲಿ 173 ಮಂದಿಯಲ್ಲಿ ಕೋವಿಡ್ –19 ಸೋಂಕು ದೃಢಪಟ್ಟಿದ್ದು, ಒಟ್ಟು ಪ್ರಕರಣ 5143ಕ್ಕೇರಿಕೆಯಾಗಿದೆ.

ಉಡುಪಿ ತಾಲ್ಲೂಕಿನ 76, ಕುಂದಾಪುರದ 57 ಹಾಗೂ ಕಾರ್ಕಳ ತಾಲ್ಲೂಕಿನ 39 ಹಾಗೂ ಬೇರೆ ಜಿಲ್ಲೆಯ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇವರಲ್ಲಿ 111 ಜನರಿಗೆ ರೋಗ ಲಕ್ಷಣಗಳಿಲ್ಲ, 62 ಮಂದಿಗೆ ಮಾತ್ರ ಲಕ್ಷಣಗಳು ಕಂಡುಬಂದಿವೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ 46, ಐಎಲ್‌ಐ ಲಕ್ಷಣಗಳಿದ್ದ 73, ಹೊರ ಜಿಲ್ಲೆಗಳಿಗೆ ಪ್ರಯಾಣ ಬೆಳೆಸಿದ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದೆ. 51 ಜನರ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.

ಸೋಂಕಿತರಲ್ಲಿ ಇಬ್ಬರನ್ನು ಕೋವಿಡ್ ಕೇರ್ ಸೆಂಟರ್‌ಗೆ, 68 ಮಂದಿಗೆ ಹೋಂ ಐಸೊಲೇಷನ್ ಹಾಗೂ ಉಳಿದ 103 ಜನರಿಗೆ ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

1,272 ಮಾದರಿ ಸಂಗ್ರಹ

ಬುಧವಾರ 1,853 ಜನರ ಗಂಟಲ ದ್ರವದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. 1,140 ವರದಿಗಳು ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5,143ಕ್ಕೇರಿಕೆಯಾಗಿದ್ದು, 2027 ಸಕ್ರಿಯ ಪ್ರಕರಣಗಳಿವೆ. ಬುಧವಾರ 124 ಸೇರಿ ಇದುವರೆಗೂ 3,072 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇಬ್ಬರು ಸಾವು

ಇಬ್ಬರು ಕೋವಿಡ್ ಸೋಂಕಿತರು ಬುಧವಾರ ಮೃತಪಟ್ಟಿದ್ದಾರೆ. ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಉಡುಪಿ ತಾಲ್ಲೂಕಿನ 72 ವರ್ಷದ ವೃದ್ಧ ಹಾಗೂ 55 ವರ್ಷದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಮೃತರಾದ ಸೋಂಕಿತರ ಸಂಖ್ಯೆ 44ಕ್ಕೇರಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.