ಶುಕ್ರವಾರ, ಜೂನ್ 5, 2020
27 °C
ಒಂದೇ ದಿನ 1,082 ಮಾದರಿ ರವಾನೆ

ಮೂವರಲ್ಲಿ ಕೋವಿಡ್ ಸೋಂಕು: ಮಹಾರಾಷ್ಟ್ರ ಮೂಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಮತ್ತೆ ಮೂವರಲ್ಲಿ ಕೋವಿಡ್–19 ಸೋಂಕು ಪತ್ತೆಯಾಗಿದೆ. ಈಚೆಗೆ ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದಿದ್ದ 31 ಹಾಗೂ 55 ವರ್ಷದ ವ್ಯಕ್ತಿ, 48 ವರ್ಷದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದ್ದು, ಮೂವರನ್ನು ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಒಂದೇ ದಿನ 1,082 ಮಾದರಿ ರವಾನೆ: ಹೊರ ರಾಜ್ಯ ಹಾಗೂ ವಿದೇಶಗಳಿಂದ ಬಂದು ಕ್ವಾರಂಟೈನ್‌ನಲ್ಲಿರುವ ಹಾಗೂ ಸೋಂಕಿತ ಲಕ್ಷಣಗಳು ಕಾಣಿಸಿಕೊಂಡಿದ್ದ 1,082 ಮಂದಿಯ ಗಂಟಲ ದ್ರವದ ಮಾದರಿಯನ್ನು ಶುಕ್ರವಾರ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಇವರಲ್ಲಿ ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ 9, ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ 22, ಐಎಲ್‌ಐ 25 ಹಾಗೂ ಹಾಟ್‌ಸ್ಪಾಟ್‌ಗಳಿಂದ ಬಂದಿದ್ದ 1,026 ಜನರು ಸೇರಿದ್ದಾರೆ. ಒಟ್ಟು 2,409 ವರದಿಗಳ ಫಲಿತಾಂಶ ಬರಬೇಕಿದೆ.

17 ಮಂದಿ ಐಸೋಲೇಷನ್‌ ವಾರ್ಡ್‌ಗೆ ದಾಖಲು: ಕೊರೊನಾ ಸೋಂಕಿತ ಲಕ್ಷಣಗಳು ಕಾಣಿಸಿಕೊಂಡ 12 ಪುರುಷರು ಹಾಗೂ ಐವರು ಮಹಿಳೆಯರಿಗೆ ಐಸೊಲೇಷನ್‌ ವಾರ್ಡ್‌ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

8,010 ಮಂದಿ ಕ್ವಾರಂಟೈನ್‌: ಹೊರ ರಾಜ್ಯ ಹಾಗೂ ವಿದೇಶಗಳಿಂದ ಜಿಲ್ಲೆಗೆ ಬಂದಿರುವ 8,012 ಮಂದಿಯನ್ನು ಹಲವು ತಾಲ್ಲೂಕುಗಳಲ್ಲಿ ಹೋಟೆಲ್‌ ಹಾಗೂ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿರಿಸಲಾಗಿದೆ. ಎಲ್ಲರ ಗಂಟಲ ದ್ರವದ ಮಾದರಿಯನ್ನು ಹಂತ ಹಂತವಾಗಿ ಪರೀಕ್ಷೆಗೆ ಕಳಿಸಲಾಗುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು