ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಒಂದೂ ಕೋವಿಡ್–19 ಸೋಂಕು ಪ್ರಕರಣ ಪತ್ತೆಯಾಗಿಲ್ಲ. ಈ ಮೂಲಕ ಹಲವು ದಿನಗಳ ಬಳಿಕ ಜಿಲ್ಲೆ ನಿರಾಳವಾದಂತಾಗಿದೆ.

ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗಿ, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿತ್ತು. ಜೂನ್ 5ರಂದು 210 ಸೋಂಕಿತ ಪ್ರಕರಣಗಳು ದೃಢಪಟ್ಟು, ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಕಳೆದ ಎರಡು ದಿನಗಳಿಂದ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿರುವುದು ಸ್ವಲ್ಪ ನೆಮ್ಮದಿ ಮೂಡಿಸಿದೆ.

ಮತ್ತೊಂದೆಡೆ, ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖರಾಗುತ್ತಿರುವುದು ಆಶಾದಾಯಕ ಬೆಳವಣಿಗೆ. ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 103 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.