ಶನಿವಾರ, ಜುಲೈ 24, 2021
22 °C
ತಹಶೀಲ್ದಾರ್ ಕಚೇರಿ, ನಗರಸಭೆ ಸಿಬ್ಬಂದಿಗೂ ಸೋಂಕು: ಕಚೇರಿಗಳು ಬಂದ್‌

ಉಡುಪಿ: 72 ಮಂದಿಗೆ ಕೋವಿಡ್‌ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 72 ಮಂದಿಯಲ್ಲಿ ಕೋವಿಡ್‌–19 ಸೋಂಕು ದೃಢಪಟ್ಟಿದೆ. ಉಡುಪಿಯ 16, ಕುಂದಾಪುರದ 41 ಹಾಗೂ ಕಾರ್ಕಳದ 15 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಎಲ್ಲರನ್ನೂ ಕೋವಿಡ್‌ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.‌

ಸೋಂಕಿತರಲ್ಲಿ 51 ಪುರುಷರು, 19 ಮಹಿಳೆಯರು ಹಾಗೂ ಇಬ್ಬರು ಮಕ್ಕಳಿದ್ದಾರೆ. ಬೆಂಗಳೂರು ಪ್ರಯಾಣ ಹಿನ್ನೆಲೆ ಹೊಂದಿರುವ 7, ಮಂಗಳೂರು ಪ್ರಯಾಣ ಹಿನ್ನೆಲೆ ಇರುವ ಇಬ್ಬರು, ತೀವ್ರ ಉಸಿರಾಟದ ಸಮಸ್ಯೆ ಇದ್ದ ಇಬ್ಬರಿಗೆ ಹಾಗೂ ಶೀತಜ್ವರದ ಲಕ್ಷಣಗಳಿದ್ದ 14 ಮಂದಿಗೆ, ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ 48 ಜನರಿಗೆ ಕೋವಿಡ್‌ ತಗುಲಿದೆ.‌

80 ಮಂದಿ ಗುಣಮುಖ:

ಮಂಗಳವಾರ ಸೋಂಕಿನಿಂದ ಗುಣಮುಖರಾದ 80 ಜನ ಆಸ್ಪತ್ರೆಯಿಂದ ಬಿಡುಗಡೆಯಾದರು. ಜಿಲ್ಲೆಯಲ್ಲಿ ಸದ್ಯ 1,360 ಸಕ್ರಿಯ ಪ್ರಕರಣಗಳಿದ್ದು, ಐವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ 1,733ಕ್ಕೇರಿಕೆಯಾಗಿದೆ.

115 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 1,080 ವರದಿಗಳು ಬರುವುದು ಬಾಕಿ ಇದೆ. ಸೋಂಕಿನ ಲಕ್ಷಣಗಳು ಕಂಡುಬಂದ 29 ಜನರನ್ನು ಐಸೊಲೇಷನ್‌ ವಾರ್ಡ್‌ಗೆ ದಾಖಲಿಸಲಾಗಿದೆ.

ನಗರಸಭೆ ಸೀಲ್‌ಡೌನ್‌:

ನಗರಸಭೆಯ ಆರೋಗ್ಯ ಇಲಾಖೆ ಸಿಬ್ಬಂದಿಗೆ ಕೋವಿಡ್‌ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನಗರಸಭೆ ಕಚೇರಿಯನ್ನು ಮುಚ್ಚಲಾಗಿದೆ. ಸ್ಯಾನಿಟೈಸ್ ಮಾಡಿದ ಬಳಿಕ ಸಾರ್ವಜನಿಕರಿಗೆ ಪ್ರವೇಶ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗ್ರಾಮ ಸಹಾಯಕನಿಗೆ ಸೋಂಕು:

ಉಡುಪಿ ತಾಲ್ಲೂಕು ಕಚೇರಿಯಲ್ಲಿ ಕಾರ್ಯ ನಿರ್ವಹಿಸುವ ಗ್ರಾಮ ಸಹಾಯಕರಿಗೂ ಸೋಂಕು ತಗುಲಿದ್ದು ಜುಲೈ 16ರವರೆಗೆ ಕಚೇರಿಯನ್ನು ಮುಚ್ಚಲಾಗಿದ್ದು, ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಸ್ಯಾನಿಟೈಸ್ ಮಾಡಿದ‌ ಬಳಿಕ ಕಚೇರಿ ತೆರೆಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.