ಗುರುವಾರ , ಜೂನ್ 17, 2021
29 °C
1,116 ಜನರಿಗೆ ಹೋಂ ಐಸೊಲೇಷನ್‌, 2816 ಗುಣಮುಖ

ಉಡುಪಿ: 126 ಮಂದಿಗೆ ಕೋವಿಡ್‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಉಡುಪಿ ತಾಲ್ಲೂಕಿನ 58, ಕುಂದಾಪುರದ 34, ಕಾರ್ಕಳದ 28 ಹಾಗೂ ಬೇರೆ ಜಿಲ್ಲೆಯ 6 ಸೇರಿ ಜಿಲ್ಲೆಯಲ್ಲಿ ಸೋಮವಾರ 126 ಮಂದಿಗೆ ಕೋವಿಡ್‌–19 ಸೋಂಕು ದೃಢಪಟ್ಟಿದೆ.

ಶೀತಜ್ವರ ಲಕ್ಷಣಗಳಿದ್ದ 27, ತೀವ್ರ ಉಸಿರಾಟದ ಸಮಸ್ಯೆ ಇರುವ ನಾಲ್ವರಲ್ಲಿ ಸೋಂಕು ಕಾಣಿಸಿಕೊಂಡಿದೆ. ರೋಗದ ಲಕ್ಷಣಗಳು ಕಾಣಿಸಿಕೊಂಡವನ್ನು ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಲಕ್ಷಣಗಳಿಲ್ಲದ 1,116 ಮಂದಿಯನ್ನು ಹೋಂ ಐಸೊಲೇಷನ್‌ನಲ್ಲಿರಿಸಲಾಗಿದೆ.

1,122 ಮಾದರಿ ಸಂಗ್ರಹ

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಐಎಲ್‌ಐ, ಸಾರಿ ಲಕ್ಷಣಗಳು ಇರುವ 1,122 ಜನರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 526 ವರದಿ ಬರುವುದು ಬಾಕಿ ಇದೆ.

ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ 39 ಜನರನ್ನು ಆಸ್ಪತ್ರೆಯ ಐಸೊಲೇಷನ್‌ ವಾರ್ಡ್‌ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಸೋಮವಾರ 116 ಸೇರಿ ಜಿಲ್ಲೆಯಲ್ಲಿ ಇದುವರೆಗೂ 2,816 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1,951 ಸಕ್ರಿಯ ಸೋಂಕಿತ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 4,800ಕ್ಕೇರಿಕೆಯಾಗಿದೆ. ಮೃತರ ಸಂಖ್ಯೆ 36ಕ್ಕೇರಿಕೆಯಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.