ಗುರುವಾರ , ಅಕ್ಟೋಬರ್ 1, 2020
27 °C
183 ಮಂದಿ ಗುಣಮುಖ; ಆಸ್ಪತ್ರೆಯಿಂದ ಬಿಡುಗಡೆಯಾದವರು 3,768

ಉಡುಪಿ | ಕೋವಿಡ್‌: ನಾಲ್ವರು ಸಾವು, 219 ಪಾಸಿಟಿವ್ ‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ ನಾಲ್ವರು ಕೋವಿಡ್–19‌ ಸೋಂಕಿತರು ಮೃತಪಟ್ಟಿದ್ದು, ಹೊಸದಾಗಿ 219 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಉಡುಪಿ ತಾಲ್ಲೂಕಿನ 115, ಕುಂದಾಪುರದ 68 ಹಾಗೂ ಕಾರ್ಕಳದ 33 ಜನರಿಗೆ ಸೋಂಕು ತಗುಲಿದ್ದು, ಪ್ರಾಥಮಿಕ ಸಂಪರ್ಕದಿಂದ 64, ಐಎಲ್‌ಐ ಲಕ್ಷಣಗಳಿದ್ದ 39, ಶೀತಜ್ವರದ ಲಕ್ಷಣಗಳಿದ್ದ ಇಬ್ಬರು, ಅಂತರ ಜಿಲ್ಲೆ ಸಂಚಾರದಿಂದ ಒಬ್ಬರಿಗೆ, ವಿದೇಶ ಪ್ರಯಾಣ ಮಾಡಿದ್ದ ಒಬ್ಬರಲ್ಲಿ ಕೋವಿಡ್‌ ಕಾಣಿಸಿಕೊಂಡಿದೆ. 112 ಜನರ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.

58 ಸೋಂಕಿತರಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡರೆ, 161 ಮಂದಿಯಲ್ಲಿ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಅಗತ್ಯವಿದ್ದ 128 ಸೋಂಕಿತರಿಗೆ ಕೋವಿಡ್‌ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಹಾಗೂ ಮನೆಯಲ್ಲಿ ಪ್ರತ್ಯೇಕ ವಾಸಕ್ಕೆ ವ್ಯವಸ್ಥೆ ಹೊಂದಿದ್ದ 91 ಜನರಿಗೆ ಹೋಂ ಐಸೊಲೇಷನ್‌ನಲ್ಲಿರಿಸಿ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ.

1,845 ಮಾದರಿ ಸಂಗ್ರಹ: ಸೋಂಕಿತರ ಪ್ರಾಥಮಿಕ ಸಂಪರ್ಕ, ಅನಾರೋಗ್ಯ ಲಕ್ಷಣಗಳಿದ್ದ ಹಾಗೂ ಕೋವಿಡ್‌ ಹಾಟ್‌ಸ್ಪಾಟ್‌ಗಳ ಸಂಪರ್ಕವಿದ್ದ 1,845 ಜನರ ಮಾದರಿ ಸಂಗ್ರಹಿಸಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. 1,610 ವರದಿ ಬರುವುದು ಬಾಕಿ ಇದೆ.

ಮಂಗಳವಾರ 183 ಸೋಂಕಿತರು ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಗುಣವಾದವರ ಸಂಖ್ಯೆ 3,768ಕ್ಕೇರಿಕೆಯಾಗಿದೆ. ಸದ್ಯ 2676 ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರ ಸಂಖ್ಯೆ 6,510ಕ್ಕೇರಿದೆ.

ನಾಲ್ವರು ಸಾವು: ಮಂಗಳವಾರ ನಾಲ್ವರು ಕೋವಿಡ್‌ ಸೋಂಕಿತರು ಮೃತಪಟ್ಟಿದ್ದು, ಕಾರ್ಕಳದ 35 ವರ್ಷದ ವ್ಯಕ್ತಿ, ಬೈಂದೂರಿನ 48 ವರ್ಷದ ಪುರುಷ, ಉಡುಪಿಯ 66 ಹಾಗೂ 41 ವರ್ಷದ ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಸೋಂಕಿತರ ಸಾವಿನ ಸಂಖ್ಯೆ 70ಕ್ಕೇರಿಕೆಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು