ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

365 ಮಂದಿ ಗುಣಮುಖ; 278 ಪಾಸಿಟಿವ್‌

ಇಬ್ಬರು ಸಾವು; 2,729 ಸಕ್ರಿಯ ಪ್ರಕರಣ
Last Updated 21 ಆಗಸ್ಟ್ 2020, 15:13 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ ಇಬ್ಬರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು, 278 ಮಂದಿಯಲ್ಲಿ ಕೋವಿಡ್‌–19 ಸೋಂಕು ಪತ್ತೆಯಾಗಿದೆ.

ಸೋಂಕಿತರಲ್ಲಿ ಉಡುಪಿ ತಾಲ್ಲೂಕಿನ 159, ಕುಂದಾಪುರದ 99, ಕಾರ್ಕಳದ 14 ಹಾಗೂ ಇತರೆ ಜಿಲ್ಲೆಗಳ 6 ಮಂದಿ ಇದ್ದಾರೆ. ಪ್ರಾಥಮಿಕ ಸಂಪರ್ಕದಿಂದ 114, ಐಎಲ್‌ಐ ಲಕ್ಷಣಗಳಿದ್ದ 68, ಉಸಿರಾಟದ ಸಮಸ್ಯೆಯಿದ್ದ 6, ಅಂತರ ಜಿಲ್ಲೆ ಪ್ರಯಾಣ ಬೆಳೆಸಿದ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. 89 ಜನರ ಸೋಂಕಿನ ಮೂಲ ಪತ್ತೆಯಾಗಿಲ್ಲ.

85 ಸೋಂಕಿತರಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡರೆ 193 ಜನರಲ್ಲಿ ಲಕ್ಷಣಗಳು ಕಾಣಿಸಿಕೊಂಡಿಲ್ಲ. 157 ಪುರುಷರು ಹಾಗೂ 121 ಮಹಿಳೆಯರು ಸೋಂಕಿತರಾಗಿದ್ದು, 86 ರೋಗಿಗಳನ್ನು ಕೋವಿಡ್‌ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್ ಕೇಂದ್ರಗಳಿಗೆ ದಾಖಲಿಸಿದರೆ, 192 ಸೋಂಕಿತರನ್ನು ಹೋಂ ಐಸೊಲೇಷನ್‌ನಲ್ಲಿರಿಸಲಾಗಿದೆ.

1,516 ಮಾದರಿ ಸಂಗ್ರಹ

ಸೋಂಕಿನ ಲಕ್ಷಣಗಳು ಕಂಡುಬಂದ, ಪ್ರಾಥಮಿಕ ಸಂಪರ್ಕಕ್ಕೆ ಬಂದ 1,516 ಜನರ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. 1,017 ವರದಿಗಳು ಬರುವುದು ಬಾಕಿ ಇದೆ.

ಶುಕ್ರವಾರ ಸೋಂಕಿತರಿಗಿಂತ ಗುಣಮುಖರಾದವರ ಪ್ರಮಾಣ ಹೆಚ್ಚಿದ್ದು, 365 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ 6,857 ಮಂದಿ ಗುಣವಾಗಿದ್ದಾರೆ. 2,729 ಸಕ್ರಿಯ ಪ್ರಕರಣ ಹಾಗೂ ಒಟ್ಟು ಸೋಂಕಿತರ ಸಂಖ್ಯೆ 9,668 ಇವೆ.‌

ಇಬ್ಬರು ಸಾವು

ಶನಿವಾರ ಹೃದ್ರೋಗ, ಕಿಡ್ನಿ ಸಮಸ್ಯೆ, ರಕ್ತದೊತ್ತಡ, ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ಕುಂದಾಪುರ ತಾಲ್ಲೂಕಿನ 61 ವರ್ಷದ ವ್ಯಕ್ತಿ, ಉಡುಪಿ ತಾಲ್ಲೂಕಿನ 80 ವರ್ಷದ ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮೃತಪಟ್ಟ ಸೋಂಕಿತರ ಸಂಖ್ಯೆ 82ಕ್ಕೇರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT