ಮಂಗಳವಾರ, ಮೇ 11, 2021
19 °C

ಉಡುಪಿ: 788 ಸೋಂಕಿತರು ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಭಾನುವಾರ 788 ಮಂದಿ ಕೋವಿಡ್‌ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕಿನಿಂದ ಮುಕ್ತವಾದವರ ಸಂಖ್ಯೆ 29916ಕ್ಕೆ ಏರಿಕೆಯಾಗಿದೆ.

ಇದರ ಮಧ್ಯೆ ಭಾನುವಾರ 653 ಮಂದಿಯಲ್ಲಿ ಕೋವಿಡ್‌ ದೃಢಪಟ್ಟಿದ್ದು, ಸೋಂಕಿತರಲ್ಲಿ ಉಡುಪಿಯ 347, ಕುಂದಾಪುರದ 200, ಕಾರ್ಕಳದ 104 ಹಾಗೂ ಬೇರೆ ಜಿಲ್ಲೆಗಳ ಇಬ್ಬರು ಇದ್ದಾರೆ. 331 ಪುರುಷರು ಹಾಗೂ 321 ಮಹಿಳೆಯರಿಗೆ ಸೋಂಕು ತಗುಲಿದ್ದು, 273 ಮಂದಿಯಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡರೆ, 380 ಮಂದಿಯಲ್ಲಿ ಲಕ್ಷಣಗಳು ಇಲ್ಲ.

22 ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದರೆ, 631 ಮಂದಿ ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.