ಸೋಮವಾರ, ಜೂನ್ 21, 2021
29 °C
ಸತತ ಎರಡನೇ ಒಂದೂವರೆ ಸಾವಿರದ ಗಡಿ ಗಡಿ ದಾಟಿದ ಸೋಂಕು

ಕೋವಿಡ್‌: 6 ಸಾವು, 1,526 ಮಂದಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ 6 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಉಡುಪಿಯ 87, 69, 72 ವರ್ಷದ ವೃದ್ಧರು, 47 ವರ್ಷ ಮಹಿಳೆ, ಕುಂದಾಪುರದ 64 ವರ್ಷದ ವ್ಯಕ್ತಿ ಹಾಗೂ ಕಾರ್ಕಳದ 62 ವರ್ಷದ ಮಹಿಳೆ ಮೃತಪಟ್ಟವರು.

ಮೃತರೆಲ್ಲರೂ ತೀವ್ರ ಉಸಿರಾಟದ ಸಮಸ್ಯೆ ಸೇರಿದಂತೆ ಇತರೆ ಕಾಯಿಲೆಗಳಿಂದು ಬಳಲುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ ಸೋಂಕಿನಿಂದ 212 ಮಂದಿ ಮೃತಪಟ್ಟಿದ್ದಾರೆ.

ಮತ್ತೊಂದೆಡೆ ಸೋಂಕಿನ ಪ್ರಮಾಣವೂ ಹೆಚ್ಚಾಗಿದ್ದು, 1,526 ಮಂದಿಗೆ ಕೋವಿಡ್‌ ದೃಢಪಟ್ಟಿದೆ. ಜಲ್ಲೆಯಲ್ಲಿ ಸತತ ಎರಡನೇ ದಿನವೂ ಸೋಂಕಿತರ ಸಂಖ್ಯೆ ಒಂದೂವರೆ ಸಾವಿರದ ಗಡಿ ದಾಟಿದೆ. ಉಡುಪಿಯ 682, ಕುಂದಾಪುರದ 595, ಕಾರ್ಕಳದ 242 ಹಾಗೂ ಬೇರೆ ಜಿಲ್ಲೆಗಳ 7 ಮಂದಿಗೆ ಸೋಂಕು ತಗುಲಿದ್ದು, 342 ಸೋಂಕಿತರಲ್ಲಿ ರೋಗ ಲಕ್ಷಣಗಳಿದ್ದರೆ, 1,184 ಮಂದಿಯಲ್ಲಿ ಲಕ್ಷಣಗಳು ಇಲ್ಲ.

709 ಮಹಿಳೆಯರಿಗೆ ಹಾಗೂ 817 ಪುರುಷರಿಗೆ ಸೋಂಕು ತಗುಲಿದ್ದು, 33 ಮಂದಿ ಆಸ್ಪತ್ರೆಗಳಲ್ಲಿ ಹಾಗೂ ಉಳಿದ 1493 ಮಂದಿ ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೂ 1,94,770 ಜನರಿಗೆ ಮೊದಲ ಡೋಡ್‌, 56365 ಮಂದಿಗೆ ಎರಡನೇ ಡೋಸ್‌ ಸೇರಿ 2,51,135 ಡೋಸ್ ಲಸಿಕೆ ಹಾಕಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.