ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿಯಲ್ಲಿ ಸಾವಿರದ ಗಡಿಗಿಳಿದ ಸೋಂಕಿತರ ಪ್ರಮಾಣ

981 ಸಕ್ರಿಯ ಸೋಂಕಿತರು ಮಾತ್ರ: 20,505 ಮಂದಿ ಗುಣಮುಖ
Last Updated 27 ಅಕ್ಟೋಬರ್ 2020, 16:08 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ 1,000ದ ಗಡಿಗೆ ಇಳಿಮುಖವಾಗಿದೆ. ಒಟ್ಟು ಪ್ರಕರಣಗಳು 21,650 ಇದ್ದರೂ, ಸೋಂಕಿತರ ಸಂಖ್ಯೆ ಇರುವುದು ಕೇವಲ 981. ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಸೋಂಕು ಕಡಿಮೆಯಾಗುತ್ತಿರುವುದು ಸಾರ್ವಜನಿಕರಲ್ಲಿ ನಿರಾಳಭಾವ ಮೂಡಿಸಿದೆ.

ಕಳೆದ 2 ವಾರಗಳಿಂದ ಸೋಂಕಿನ ಪ್ರಮಾಣ ಗಣನೀಯವಾಗಿ ತಗ್ಗುತ್ತಿದ್ದು, ಆಗಸ್ಟ್‌ನಲ್ಲಿ ಗರಿಷ್ಠ ಮಟ್ಟದಲ್ಲಿದ್ದ ಸೋಂಕಿನ ಪ್ರಮಾಣ ಈಗ ಕನಿಷ್ಠ ಮಟ್ಟಕ್ಕೆ ತಲುಪಿದೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರವೂ ಶೇ 10ಕ್ಕಿಂತ ಕಡಿಮೆ ಇದೆ.

ಮಂಗಳವಾರ ಕೋವಿಡ್‌ನಿಂದ ಒಬ್ಬರು ಮೃತಪಟ್ಟಿದ್ದು, 85 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿಯ 43, ಕುಂದಾಪುರದ 23, ಕಾರ್ಕಳದ 15, ಇತರೆ ಜಿಲ್ಲೆಗಳ ನಾಲ್ವರಿಗೆ ಸೋಂಕು ತಗುಲಿದೆ.

ಸೋಂಕಿತರಲ್ಲಿ 40 ಮಹಿಳೆಯರು, 45 ಪುರುಷರಿದ್ದು, ನಾಲ್ವರು ಕೋವಿಡ್ ಆಸ್ಪತ್ರೆಗಳಲ್ಲಿ, 81 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಮಂಗಳವಾರ 204 ಸೇರಿ 20,505 ಸೋಂಕಿತರು ಗುಣಮುಖರಾಗಿದ್ದಾರೆ. 180 ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT