ಬುಧವಾರ, ನವೆಂಬರ್ 25, 2020
18 °C

ಉಡುಪಿ: 44 ಮಂದಿಗೆ ಕೋವಿಡ್‌, ಒಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಸೋಮವಾರ 44 ಮಂದಿಯಲ್ಲಿ ಕೋವಿಡ್‌ ದೃಢಪಟ್ಟಿದೆ. ಉಡುಪಿ ತಾಲ್ಲೂಕಿನ 19, ಕುಂದಾಪುರದ 19 ಹಾಗೂ ಕಾರ್ಕಳದ 6 ಜನರಿಗೆ ಸೋಂಕು ತಗುಲಿದೆ.

ಉಡುಪಿ ತಾಲ್ಲೂಕಿನ 71 ವರ್ಷದ ವೃದ್ಧ ಸೋಂಕಿನಿಂದ ಮೃತಪಟ್ಟಿದ್ದು, ಇದುವರೆಗೂ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 179ಕ್ಕೆ ಏರಿಕೆಯಾಗಿದೆ.

ಸೋಮವಾರ 199 ಸೋಂಕಿತರು ಗುಣಮುಖರಾಗಿದ್ದು, 20,301 ಮಂದಿ ಸೋಂಕು ಮುಕ್ತರಾಗಿದ್ದಾರೆ. 1101 ಸಕ್ರಿಯ ಸೋಂಕಿತ ಪ್ರಕರಣಗಳು ಇವೆ.

ಭಾನುವಾರ 118 ಮಂದಿಗೆ ಕೋವಿಡ್ ದೃಢಪಟ್ಟಿತ್ತು. 175 ಜನರು ಗುಣಮುಖರಾಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು