ಗುರುವಾರ , ಆಗಸ್ಟ್ 11, 2022
23 °C
ಉಡುಪಿ: ಐವರಿಗೆ ಸೋಂಕು ದೃಢ

41 ದಿನಗಳ ಬಳಿಕ ಕೋವಿಡ್‌ನಿಂದ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: 41 ದಿನಗಳ ಬಳಿಕ ಕೋವಿಡ್‌ನಿಂದ ಬಳಲುತ್ತಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕಾರ್ಕಳ ತಾಲ್ಲೂಕಿನ 69 ವರ್ಷದ ವೃದ್ಧ ಮೃತರು. ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್‌ನಿಂದ ಸಾವನ್ನಪ್ಪಿದವರ ಸಂಖ್ಯೆ 188ಕ್ಕೆ ಏರಿಕೆಯಾಗಿದೆ.

ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿ ತೀವ್ರ ಉಸಿರಾಟದ ಸಮಸ್ಯೆ, ಮಧುಮೇಹ ಸೇರಿದಂತೆ ಹಲವು ಗಂಭೀರ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಸೋಂಕು ಉಲ್ಬಣಗೊಂಡು ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಶುಕ್ರವಾರ ಕುಂದಾಪುರ ತಾಲ್ಲೂಕಿನ ಐವರಲ್ಲಿ ಕೋವಿಡ್‌ ದೃಢಪಟ್ಟಿದೆ. ಸೋಂಕಿತರಲ್ಲಿ ಮೂವರು ಪುರುಷರು, ಇಬ್ಬರು ಮಹಿಳೆಯರು ಇದ್ದು, ಒಬ್ಬರು ಕೋವಿಡ್ ಆಸ್ಪತ್ರೆಯಲ್ಲಿ, ನಾಲ್ವರು ಹೋಂಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಟ್ಟು ಸೋಂಕಿತ ಪ್ರಕರಣಗಳು 22,946 ಇದ್ದು, ಸಕ್ರಿಯ ಸೋಂಕಿತರು 116 ಮಂದಿ ಇದ್ದಾರೆ. 22,642 ಸೋಂಕಿತರು ಗುಣಮುಖರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು