ಗುರುವಾರ , ಫೆಬ್ರವರಿ 25, 2021
19 °C

ಉಡುಪಿ: ನಾಲ್ವರಿಗೆ ಕೋವಿಡ್‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ ನಾಲ್ವರು ಕೋವಿಡ್‌–19 ದೃಢಪಟ್ಟಿದ್ದು, ಉಡುಪಿ ಹಾಗೂ ಕುಂದಾಪುರದ ತಲಾ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಟ್ಟು ಸೋಂಕಿತ ಪ್ರಕರಣಗಳು 23,227 ಇದ್ದು, 27 ಸಕ್ರಿಯ ಪ್ರಕರಣಗಳಿವೆ.

ಮಂಗಳವಾರ ಮೂವರು ಸೇರಿ 23,011 ಸೋಂಕಿತರು ಗುಣಮುಖರಾಗಿದ್ದಾರೆ. 189 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

610 ಮಂದಿಗೆ ಕೋವಿಡ್‌ ಲಸಿಕೆ:

ಜ.16ರಿಂದ ಜಿಲ್ಲೆಯಲ್ಲಿ ಕೋವಿಡ್‌ ಲಸಿಕಾ ಆಂದೋಲನ ನಡೆಯುತ್ತಿದ್ದು, ಇದುವರೆಗೂ 610 ಮಂದಿಗೆ ಲಸಿಕೆ ಹಾಕಲಾಗಿದೆ. ಜ.16ರಂದು 287, 17ರಂದು 40, 18ರಂದು 48 ಹಾಗೂ 19ರಂದು 235 ಮಂದಿಗೆ ಲಸಿಕೆ ಹಾಕಲಾಗಿದೆ. ಒಟ್ಟು 1,139 ಮಂದಿಗೆ ಲಸಿಕೆ ಗುರಿ ಹೊಂದಲಾಗಿದ್ದು, 610 ಮಂದಿಗೆ ಮಾತ್ರ ನೀಡಲಾಗಿದ್ದು, ಶೇ 53.6ರಷ್ಟು ಗುರಿ ಸಾಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು