ಉಡುಪಿ: ಜಿಲ್ಲೆಯಲ್ಲಿ ಸೋಂಕಿನ ಜತೆಗೆ ಕೋವಿಡ್ ಮರಣ ಪ್ರಮಾಣವೂ ಹೆಚ್ಚುತ್ತಿದ್ದು ಶುಕ್ರವಾರ ಇಬ್ಬರು ಮೃತಪಟ್ಟಿದ್ದಾರೆ. ಉಡುಪಿಯ 50 ವರ್ಷದ ವ್ಯಕ್ತಿ ಹಾಗೂ 73 ವರ್ಷದ ವೃದ್ಧರು ಮೃತಪಟ್ಟವರು.

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಇಬ್ಬರು ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಮೃತ ಸೋಂಕಿತರ ಸಂಖ್ಯೆ 198ಕ್ಕೆ ಏರಿಕೆಯಾಗಿದೆ.

ಮತ್ತೊಂದೆಡೆ ಸೋಂಕಿನ ಪ್ರಮಾಣವೂ ಹೆಚ್ಚುತ್ತಿದ್ದು, ಶುಕ್ರವಾರ 660 ಮಂದಿಗೆ ಕೋವಿಡ್ ದೃಢಪಟ್ಟಿದೆ. 371 ಪುರುಷರು, 289 ಮಹಿಳೆಯರು ಸೋಂಕಿತರಾಗಿದ್ದು, 407 ಮಂದಿಯಲ್ಲಿ ರೋಗದ ಲಕ್ಷಣಗಳು ಕಂಡುಬಂದರೆ, 253 ಮಂದಿಯಲ್ಲಿ ಲಕ್ಷಣಗಳು ಇಲ್ಲ.

ಉಡುಪಿ ತಾಲ್ಲೂಕಿನ 346, ಕುಂದಾಪುರ ತಾಲ್ಲೂಕಿನ 217, ಕಾರ್ಕಳ ತಾಲ್ಲೂಕಿನ 93 ಹಾಗೂ ಬೇರೆ ಜಿಲ್ಲೆಗಳ 4 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, 57 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 603 ಸೋಂಕಿತರು ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಒಟ್ಟು ಸೋಂಕಿತರು–31,542

ಸಕ್ರಿಯ ಪ್ರಕರಣ–2,596

ಗುಣಮುಖ ಆದವರು–28,748

ಒಟ್ಟು ಸಾವು–198

ಹೊಸ ಪ್ರಕರಣ–660

ಗುಣಮುಖ–419

ಸಾವು–2.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.