ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

109 ಮಂದಿಗೆ ಕೋವಿಡ್‌ ಸೋಂಕು

ಜಿಲ್ಲೆಯಲ್ಲಿ ಸೋಂಕಿತರ ಸಾವು 22ಕ್ಕೇರಿಕೆ
Last Updated 28 ಜುಲೈ 2020, 15:16 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಕಳೆದ ಎರಡ್ಮೂರು ದಿನಗಳಲ್ಲಿ 8 ಕೋವಿಡ್ ಸೋಂಕಿತರು ಮೃತಪಟ್ಟಿದ್ದು, ಮೃತರ ಸಂಖ್ಯೆ 22ಕ್ಕೇರಿಕೆಯಾಗಿದೆ. ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಮಂಗಳವಾರ 109 ಮಂದಿಯಲ್ಲಿ ಕೋವಿಡ್‌–19 ದೃಢಪಟ್ಟಿದೆ. ‌‌

926 ಮಾದರಿ ರವಾನೆ:ಶೀತಜ್ವರ, ಕೋವಿಡ್‌ ಶಂಕೆ ಹಾಗೂ ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ 926 ಜನರ ಮಾದರಿಯನ್ನು ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಮಂಗಳವಾರ ಬಂದ ಪರೀಕ್ಷಾ ವರದಿಗಳಲ್ಲಿ 422 ನೆಗೆಟಿವ್ ಇದ್ದರೆ 109 ಪಾಸಿಟಿವ್ ಕಂಡುಬಂದಿದೆ.

ಸೋಂಕಿನ ಲಕ್ಷಣಗಳು ಕಂಡುಬಂದ 39 ಜನರನ್ನು ಐಸೊಲೇಷನ್‌ ವಾರ್ಡ್‌ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರೋಗ ಲಕ್ಷಣಗಳು ಇಲ್ಲದವರಿಗೆ ಹೋಂ ಐಸೊಲೇಷನ್‌ ಮಾಡಲಾಗಿದೆ.

ಜಿಲ್ಲೆಯಲ್ಲಿ ಮಂಗಳವಾರ 55 ಸೇರಿ ಇದುವರೆಗೂ 2239 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1461 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಸೋಂಕಿತರ ಸಂಖ್ಯೆ 3722ಕ್ಕೇರಿಕೆಯಾಗಿದೆ.

ಹೆಚ್ಚುತ್ತಿದೆ ಸಾವಿನ ಸಂಖ್ಯೆ:ಕಾರ್ಕಳ ತಾಲ್ಲೂಕಿನ 60 ವರ್ಷದ ವ್ಯಕ್ತಿ ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ನೇಜಾರಿನ 44 ವರ್ಷದ ವ್ಯಕ್ತಿ ಕೂಡ ಸಾವನ್ನಪ್ಪಿದ್ದಾರೆ. ಇಬ್ಬರಿಗೂ ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿತ್ತು.

ಕುಂದಾಪುರ ತಾಲ್ಲೂಕಿನ 60 ವರ್ಷದವರು, ಶಂಕರನಾರಾಯನದ 45 ವರ್ಷದವರು, ಉಳ್ಳೂರಿನ 40 ವರ್ಷದ ಸೋಂಕಿತರು ಮೃತರಾಗಿದ್ದಾರೆ. ಇವರೆಲ್ಲರೂ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.‌ ಮಂಗಳವಾರ ಕೂಡ ಒಬ್ಬರು ಮೃತಪಟ್ಟಿರುವ ಮಾಹಿತಿ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT