ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿಯಲ್ಲಿ ಇಂದು 15 ಮಂದಿಗೆ ಕೋವಿಡ್‌

Last Updated 7 ಡಿಸೆಂಬರ್ 2020, 14:42 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಸೋಮವಾರ 15 ಮಂದಿಗೆ ಕೋವಿಡ್‌ ದೃಢಪಟ್ಟಿದೆ. ಉಡುಪಿಯ 9, ಕುಂದಾಪುರದ ನಾಲ್ವರು, ಕಾರ್ಕಳದ ಹಾಗೂ ಬೇರೆ ಜಿಲ್ಲೆಯ ತಲಾ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರಲ್ಲಿ 8 ಪುರುಷರು ಹಾಗೂ 7 ಮಹಿಳೆಯರು ಇದ್ದಾರೆ.

31 ಮಂದಿ ಗುಣಮುಖರಾಗಿದ್ದು ಜಿಲ್ಲೆಯಲ್ಲಿ ಸೋಂಕಿನಿಂದ ಮುಕ್ತರಾದವರ ಸಂಖ್ಯೆ 22,462ಕ್ಕೆ ಏರಿಕೆಯಾಗಿದೆ. ಸಕ್ರಿಯ ಸೋಂಕಿತರ ಸಂಖ್ಯೆ 154ಕ್ಕೆ ಇಳಿಕೆಯಾಗಿದ್ದು, ಸೋಂಕು ಪ್ರಮಾಣ ತಗ್ಗುತ್ತಿದೆ.

ಒಟ್ಟು ಪ್ರಕರಣ ಸಂಖ್ಯೆ 22,803 ಇದ್ದು, 187 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT