ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

319 ಮಂದಿಗೆ ಕೋವಿಡ್‌ ಪಾಸಿಟಿವ್‌

Last Updated 12 ಅಕ್ಟೋಬರ್ 2020, 14:27 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಸೋಮವಾರ 319 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಸೋಂಕಿನಿಂದ ಕಾರ್ಕಳದ ವೃದ್ಧ ಮೃತಪಟ್ಟಿದ್ದಾರೆ. ಸೋಂಕಿತರಲ್ಲಿ ಉಡುಪಿಯ 150, ಕುಂದಾಪುರದ 110, ಕಾರ್ಕಳದ 53, ಬೇರೆ ಜಿಲ್ಲೆಗಳ 6 ಮಂದಿ ಸೇರಿದ್ದು, 161 ಮಹಿಳೆಯರು, 158 ಪುರುಷರು ಇದ್ದಾರೆ.

123 ಸೋಂಕಿತರಿಗೆ ರೋಗದ ಲಕ್ಷಣಗಳು ಕಾಣಿಸಿಕೊಂಡಿದ್ದರೆ 196 ಜನರಲ್ಲಿ ಲಕ್ಷಣಗಳು ಇಲ್ಲ. ಕೋವಿಡ್‌ ಆಸ್ಪತ್ರೆಗಳಲ್ಲಿ 33, ಹೋಂ ಐಸೊಲೇಷನ್‌ನಲ್ಲಿ 286 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

276 ಮಂದಿ ಗುಣಮುಖರಾಗಿದ್ದು, ಇದುವರೆಗೂ 17,552 ಸೋಂಕಿತರು ಸೋಂಕು ಮುಕ್ತರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 19,698 ಇದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,965 ಇವೆ. ಸೋಂಕಿನಿಂದ ಮೃತರಾದವರ ಸಂಖ್ಯೆ 166ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT