ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಇಬ್ಬರು ಸೋಂಕಿತರು ಸಾವು, 68 ಮಂದಿಗೆ ಕೋವಿಡ್‌

Last Updated 19 ಅಕ್ಟೋಬರ್ 2020, 13:50 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಸೋಮವಾರ ಕೋವಿಡ್‌–19 ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಕಾರ್ಕಳದ 63 ವರ್ಷದ ವ್ಯಕ್ತಿ ಹಾಗೂ ಕುಂದಾಪುರದ 55 ವರ್ಷದ ಸೋಂಕಿತ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇದುವರೆಗೂ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 175ಕ್ಕೆ ಏರಿಕೆಯಾಗಿದೆ.

ಸೋಮವಾರ 68 ಸೋಂಕಿತ ಪ್ರಕರಣಗಳು ದೃಡಪಟ್ಟಿದ್ದು, ಉಡುಪಿಯ 39, ಕುಂದಾಪುರದ 8, ಕಾರ್ಕಳದ 21 ಮಂದಿಗೆ ಸೋಂಕು ತಗುಲಿದೆ. 9 ಸೋಂಕಿತರಿಗೆ ರೋಗದ ಲಕ್ಷಣಗಳು ಕಂಡುಬಂದರೆ, 59 ಜನರಿಗೆ ಲಕ್ಷಣಗಳು ಕಾಣಿಸಿಕೊಂಡಿಲ್ಲ. ನಾಲ್ವರು ಕೋವಿಡ್ ಕೇರ್ ಸೆಂಟರ್ ಹಾಗೂ ಆಸ್ಪತ್ರೆಗಳಲ್ಲಿ ಹಾಗೂ 64 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಸಕ್ರಿಯ ಪ್ರಕರಣ ಸಂಖ್ಯೆ ಇಳಿಕೆ:ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಕುಸಿಯುತ್ತಿದೆ. ಒಟ್ಟು 20,938 ಸೋಂಕು ಪ್ರಕರಣಗಳಿದ್ದು, ಸಕ್ರಿಯ ಪ್ರಕರಣಗಳು 1,826 ಇವೆ. ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಸೋಮವಾರ 163 ಸೇರಿ 18,895 ಮಂದಿ ಸೋಂಕು ಮುಕ್ತರಾಗಿದ್ದಾರೆ.

ಸೋಂಕಿನ ಲಕ್ಷಣಗಳು ಕಂಡುಬಂದ 1,58,551 ಶಂಕಿತರನ್ನು ಕೋವಿಡ್‌ ಪರೀಕ್ಷೆಗೊಳಪಡಿಸಲಾಗಿದ್ದು, ಅವರಲ್ಲಿ20,938 ವರದಿ ಪಾಸಿಟಿವ್ ಹಾಗೂ 1,37,613 ವರದಿ ನೆಗೆಟಿವ್ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT