ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: 19 ಮಂದಿಗೆ ಕೋವಿಡ್

Last Updated 21 ನವೆಂಬರ್ 2020, 16:13 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಶನಿವಾರ ಮತ್ತೆ ನಾಲ್ವರು ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕೋವಿಡ್‌–19 ದೃಢಪಟ್ಟಿದೆ. ಶುಕ್ರವಾರವಷ್ಟೆ 7 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು.

ಜಿಲ್ಲೆಯಲ್ಲಿ ಅಂತಿಮ ವರ್ಷದ ಪದವಿ ತರಗತಿ ಆರಂಭವಾದ ದಿನ ಕಾಲೇಜಿಗೆ ಬಂದ ವಿದ್ಯಾರ್ಥಿಗಳಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿತ್ತು. ಇದುವೆರಗೂ ಬಂದಿರುವ ಪರೀಕ್ಷಾ ವರದಿಗಳಲ್ಲಿ 11 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರು ತರಗತಿಗೆ ಹಾಜರಾಗಿರಲಿಲ್ಲ. ಹಾಗಾಗಿ, ಭಯಪಡುವ ಅಗತ್ಯವಿಲ್ಲ. ಕೋವಿಡ್‌ ವರದಿ ನೆಗೆಟಿವ್ ಬಂದ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಶನಿವಾರ 19 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ. ಉಡುಪಿಯ 5, ಕುಂದಾಪುರದ 8 ಹಾಗೂ ಕಾರ್ಕಳದ 6 ಜನರಿಗೆ ಸೋಂಕು ತಗುಲಿದ್ದು, 9 ಮಹಿಳೆಯರು, 10 ಪುರುಷರು ಸೇರಿದ್ದಾರೆ.

ಶನಿವಾರ 35 ಸೇರಿ ಇದುವರೆಗೂ 22,108 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತ ಪ್ರಕರಣಗಳು 22,489 ಇದ್ದು, 195 ಸಕ್ರಿಯ ಸೋಂಕಿತರು ಇದ್ದಾರೆ. 187 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT