ಉಡುಪಿ: 21 ಮಂದಿಗೆ ಕೋವಿಡ್ ದೃಢ
ಉಡುಪಿ: ಜಿಲ್ಲೆಯಲ್ಲಿ ಶನಿವಾರ 21 ಮಂದಿಗೆ ಕೋವಿಡ್–19 ದೃಢಪಟ್ಟಿದೆ. ಉಡುಪಿಯ 18, ಕುಂದಾಪುರದ ಇಬ್ಬರು ಹಾಗೂ ಕಾರ್ಕಳದ ಒಬ್ಬರಿಗೆ ಸೋಂಕು ತಗುಲಿದೆ. ಸೋಂಕಿತರಲ್ಲಿ 9 ಮಹಿಳೆಯರು 12 ಪುರುಷರಿದ್ದು, ಕೋವಿಡ್ ಆಸ್ಪತ್ರೆಯಲ್ಲಿ 11 ಹಾಗೂ ಹೋಂ ಐಸೊಲೇಷನ್‌ನಲ್ಲಿ 10 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
27 ಮಂದಿ ಗುಣಮುಖರಾಗಿದ್ದು, ಇದುವರೆಗೂ 22,559 ಸೋಂಕಿತರು ಗುಣರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 22,884 ಒಟ್ಟು ಪ್ರಕರಣಗಳಿದ್ದು, 138 ಸಕ್ರಿಯ ಸೋಂಕಿತರು ಇದ್ದಾರೆ. 187 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.