ಗುರುವಾರ , ಅಕ್ಟೋಬರ್ 22, 2020
21 °C
ಜಿಲ್ಲೆಯಲ್ಲಿ ಇಳಿಕೆಯಾಗುತ್ತಿರುವ ಸೋಂಕಿನ ಪ್ರಮಾಣ

ಉಡುಪಿ: 130 ಮಂದಿಗೆ ಕೋವಿಡ್ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಭಾನುವಾರ 130 ಮಂದಿಗೆ ಕೋವಿಡ್‌–19 ಸೋಂಕು ದೃಢಪಟ್ಟಿದೆ. ಒಟ್ಟು ಪ್ರಕರಣಗಳ ಸಂಖ್ಯೆ 20,830ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,923 ಇವೆ.

ಸೋಂಕಿತರಲ್ಲಿ ಉಡುಪಿ ತಾಲ್ಲೂಕಿನ 52, ಕುಂದಾಪುರದ 44, ಕಾರ್ಕಳದ 31, ಇತರೆ ಜಿಲ್ಲೆಗಳ ಮೂವರು ಇದ್ದಾರೆ. ಚಿಕಿತ್ಸೆಗೆ ಅಗತ್ಯವಿದ್ದ 33 ಮಂದಿಗೆ ಕೋವಿಡ್‌ ಕೇರ್‌ ಸೆಂಟರ್ ಹಾಗೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ರೋಗದ ಲಕ್ಷಣ ಇಲ್ಲದ 113 ಮಂದಿಗೆ ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರಲ್ಲಿ 62 ಪುರುಷರು, 68 ಮಹಿಳೆಯರಿದ್ದು, 42 ಮಂದಿಗೆ ಸೋಂಕಿನ ಲಕ್ಷಣಗಳಿದ್ದರೆ, 88 ಜನರಿಗೆ ಲಕ್ಷಣಗಳು ಕಾಣಿಸಿಕೊಂಡಿಲ್ಲ.

ಜಿಲ್ಲೆಯಲ್ಲಿ ಇದುವರೆಗೂ 1,57,115 ಶಂಕಿತರನ್ನು ಕೋವಿಡ್‌ ಪರೀಕ್ಷೆಗೊಳಪಡಿಸಲಾಗಿದ್ದು, 1,36,285 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. 20,830 ಜನರ ವರದಿ ಪಾಸಿಟಿವ್ ಬಂದಿದ್ದು, ಇವರಲ್ಲಿ 18,732 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 173ಕ್ಕೆ ಏರಿಕೆಯಾಗಿದೆ.

ಸೋಂಕು ಪ್ರಮಾಣ ಇಳಿಕೆ: ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿರುವುದು ಸಾರ್ವಜನಿಕರಲ್ಲಿ ಕೊಂಚ ನೆಮ್ಮದಿ ತಂದಿದೆ. ಆಗಸ್ಟ್‌ನಲ್ಲಿ ಶೇ 30ರಷ್ಟಿದ್ದ ಪಾಸಿಟಿವ್ ದರ, ಈಗ ಶೇ 10ರ ಆಸುಪಾಸಿಗೆ ಬಂದಿದೆ. ಜತೆಗೆ, ವೆಂಟಿಲೇಟರ್ ಐಸಿಯು ಬೆಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಯೂ ಕುಸಿಯುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದ್ದು, ಸಾರ್ವಜನಿಕರು ಸ್ವಲ್ಪ ನಿರಾಳರಾಗುವಂತಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣವನ್ನು ತಗ್ಗಿಸಬೇಕು, ಹಿರಿಯ ಜೀವಗಳನ್ನು ರಕ್ಷಿಸಿಕೊಳ್ಳಬೇಕು ಎಂದು ಜಿಲ್ಲಾಡಳಿತ ‘ನನ್ನ ಕುಟುಂಬ, ನನ್ನ ಜವಾಬ್ದಾರಿ’ ಎಂಬ ಅಭಿಯಾನ ಆರಂಭಿಸಿದ್ದು, ಸಾರ್ವಜನಿಕರು ಕೈಜೋಡಿಸಬೇಕು. ಕುಟುಂಬದ ಹಿರಿಯರಿಗೆ ಸೋಂಕು ತಗುಲದಂತೆ ಎಚ್ಚರವಹಿಸಬೇಕು. ರೋಗದ ಲಕ್ಷಣಗಳಿದ್ದರೆ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು