ಭಾನುವಾರ, ಜೂನ್ 13, 2021
23 °C
ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ

ಐವರು ಸೋಂಕಿತರು ಸಾವು; 962 ಮಂದಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಶನಿವಾರ ಐವರು ಸೋಂಕಿತರು ಮೃತಪಟ್ಟಿದ್ದಾರೆ. ಉಡುಪಿಯ 58, 63, 58 ವರ್ಷದವರು ಹಾಗೂ ಕುಂದಾಪುರದ 66, 67 ವರ್ಷದ ವೃದ್ಧರು ಕೋವಿಡ್‌ನಿಂದ ಮೃತಪಟ್ಟವರು. ಜಿಲ್ಲೆಯಲ್ಲಿ ಕಳೆದ 6 ದಿನಗಳಲ್ಲಿ 32 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

962 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, ಸೋಂಕಿತರಲ್ಲಿ ಉಡುಪಿಯ 309, ಕುಂದಾಪುರದ 266, ಕಾರ್ಕಳದ 384 ಹಾಗೂ ಇತರೆ ಜಿಲ್ಲೆಗಳ ಮೂವರು ಸೇರಿದ್ದಾರೆ. 201 ಮಂದಿಗೆ ರೋಗದ ಲಕ್ಷಣಗಳಿದ್ದರೆ, 761 ಸೋಂಕಿತರಿಗೆ ಲಕ್ಷಣಗಳು ಕಾಣಿಸಿಕೊಂಡಿಲ್ಲ. 19 ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದರೆ, 943 ಮಂದಿ ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದಿನಿಂದ ಲಸಿಕೆ:

ಜಿಲ್ಲೆಯ ನಾಲ್ಕು ಲಸಿಕಾ ಕೇಂದ್ರಗಳಲ್ಲಿ ಸೋಮವಾರ ಮಧ್ಯಾಹ್ನದಿಂದ 18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡಲಾಗುತ್ತಿದ್ದು, ಈಗಾಗಲೇ ನೋಂದಣಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು ಎಂದು ಡಿಎಚ್ಒ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಉಡುಪಿಯ ಜಿಲ್ಲಾ ಆಸ್ಪತ್ರೆ, ಬ್ರಹ್ಮಗಿರಿಯ ಸೈಂಟ್ ಸಿಸಿಲಿಸ್ ಶಾಲೆ, ಕುಂದಾಪುರ ತಾಲ್ಲೂಕು ಆಸ್ಪತ್ರೆ ಹಾಗೂ ಕಾರ್ಕಳ ತಾಲ್ಲೂಕು ಆಸ್ಪತ್ರೆಯಲ್ಲಿ ಲಸಿಕೆ ನೀಡಲಾಗುವುದು. ಲಸಿಕೆಗೆ ನೋಮದಣಿ ಮಾಡಿಕೊಂಡಿರುವವರಿಗೆ ಸೋಮವಾರ ಬೆಳಿಗ್ಗೆ ಮೊಬೈಲ್‌ಗೆ ಸಂದೇಶ ರವಾನೆಯಾಗಲಿದ್ದು, ಸಂದೇಶ ಬಂದವರು ಮಾತ್ರ ಲಸಿಕೆ ಪಡೆಯಲು ಬರಬೇಕು ಎಂದು ಡಿಎಚ್‌ಒ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.