ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

136 ಜನರಿಗೆ ಕೋವಿಡ್‌: ಒಬ್ಬರು ಸಾವು

Last Updated 20 ಅಕ್ಟೋಬರ್ 2020, 15:32 IST
ಅಕ್ಷರ ಗಾತ್ರ

ಉಡುಪಿ: ಮಂಗಳವಾರ 136 ಜನರಿಗೆ ಕೋವಿಡ್‌–19 ಸೋಂಕು ದೃಢಪಟ್ಟಿದ್ದು, ಕಾರ್ಕಳ ತಾಲ್ಲೂಕಿನ 65 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ.

136 ಸೋಂಕಿತರಲ್ಲಿ ಉಡುಪಿಯ 66, ಕುಂದಾಪುರದ 54, ಕಾರ್ಕಳದ 16 ಮಂದಿ ಸೇರಿದ್ದು, 78 ಪುರುಷರು, 58 ಮಹಿಳೆಯರಿಗೆ ಸೋಂಕು ತಗುಲಿದೆ. 47 ರೋಗಿಗಳಿಗೆ ಸೋಂಕಿನ ಲಕ್ಷಣಗಳಿದ್ದರೆ 89 ಮಂದಿಗೆ ಲಕ್ಷಣಗಳು ಕಂಡುಬಂದಿಲ್ಲ.

ಕೋವಿಡ್ ಆಸ್ಪತ್ರೆ ಹಾಗೂ ಆರೈಕೆ ಕೇಂದ್ರಗಳಲ್ಲಿ 23, ಹೋಂ ಐಸೊಲೇಷನ್‌ನಲ್ಲಿ 113 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರ 219 ಸೇರಿ ಇದುವರೆಗೂ 19,114 ಮಂದಿ ಗುಣಮುಖರಾಗಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 20,994 ಇದ್ದು, ಸಕ್ರಿಯ ಪ್ರಕರಣಗಳು 1,742 ಇವೆ. 176 ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT