ಉಡುಪಿ: ಜಿಲ್ಲೆಯಲ್ಲಿ 118 ಮಂದಿಗೆ ಶನಿವಾರ ಕೋವಿಡ್ ದೃಢಪಟ್ಟಿದೆ. ಸೋಂಕಿತರಲ್ಲಿ ಉಡುಪಿಯ 69, ಕುಂದಾಪುರದ 34 ಹಾಗೂ ಕಾರ್ಕಳದ 15 ಮಂದಿ ಇದ್ದು, 54 ಮಹಿಳೆಯರು ಹಾಗೂ 64 ಪುರುಷರು ಸೇರಿದ್ದಾರೆ.

49 ಸೋಂಕಿತರಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡರೆ, 69 ಮಂದಿಯಲ್ಲಿ ಲಕ್ಷಣಗಳು ಇಲ್ಲ. 24 ಮಂದಿ ಆಸ್ಪತ್ರೆಗಳಲ್ಲಿ, 94 ಸೋಂಕಿತರು ಹೋಂ ಐಸೊಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 26,588 ಇದ್ದು, 583 ಸಕ್ರಿಯ ಸೋಂಕಿತರು ಇದ್ದಾರೆ. ಶನಿವಾರ 126 ಮಂದಿ ಸೇರಿ ಇದುವರೆಗೂ 25,812 ಮಂದಿ ಗುಣಮುಖರಾಗಿದ್ದಾರೆ. 193 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಅಭಿಯಾನ ಚುರುಕಾಗಿದ್ದು, 45 ವರ್ಷ ಮೇಲ್ಪಟ್ಟ 1,32,527 ಮಂದಿ ಮೊದಲ ಡೋಸ್ ಲಸಿಕೆ ಹಾಕಿಸಿಕೊಂಡಿದ್ದಾರೆ. 8,141 ಮಂದಿ ಎರಡನೇ ಡೋಸ್ ತೆಗೆದುಕೊಂಡಿದ್ದಾರೆ.

22,301 ಆರೋಗ್ಯ ಕಾರ್ಯಕರ್ತರು ಮೊದಲ ಡೋಸ್ ಹಾಗೂ 16,776 ಮಂದಿ ಎರಡನೇ ಡೋಸ್ ಪಡೆದಿದ್ದು, 6,439 ಮುಂಚೂಣಿ ಕಾರ್ಯಕರ್ತರು ಮೊದಲ ಡೋಸ್ ಹಾಗೂ 2,896 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಇದುವರೆಗೂ 1,61,267 ಮಂದಿ ಮೊದಲ ಡೋಸ್ ಹಾಗೂ 27,783 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.