ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

182 ಮಂದಿಗೆ ಕೋವಿಡ್‌ ಸೋಂಕು

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್‌ ಸೋಂಕಿತರ ಸಂಖ್ಯೆ
Last Updated 2 ಆಗಸ್ಟ್ 2020, 13:53 IST
ಅಕ್ಷರ ಗಾತ್ರ

ಉಡುಪಿ: 107 ಪುರುಷರು ಹಾಗೂ 75 ಮಹಿಳೆಯರು ಸೇರಿ 182 ಮಂದಿಗೆ ಭಾನುವಾರ ಕೋವಿಡ್‌–19 ಸೋಂಕು ದೃಢಪಟ್ಟಿದೆ. ಕುಂದಾಪುರ ತಾಲ್ಲೂಕಿನ 55, ಕಾರ್ಕಳದ 51 ಹಾಗೂ ಉಡುಪಿಯ 74 ಮಂದಿಗೆ ಸೋಂಕು ತಗುಲಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ 76 ಮಂದಿಗೆ, ಶೀತ ಜ್ವರದ ಲಕ್ಷಣಗಳಿದ್ದ 45, ತೀವ್ರ ಉಸಿರಾಟದ ಸಮಸ್ಯೆಯಿದ್ದ 6 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 55 ಜನರ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸೋಂಕಿತರನ್ನು ಆಯಾ ತಾಲ್ಲೂಕಿನ ಕೋವಿಡ್‌ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದ್ದು, ಸೋಂಕಿನ ಲಕ್ಷಣಗಳಿರುವ ಹಾಗೂ ಹೆಚ್ಚಿನ ನಿಗಾ ಅಗತ್ಯವಿದ್ದವರಿಗೆ ಡಾ.ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿನ ಲಕ್ಷಣಗಳು ಇಲ್ಲದವರು ಮನೆಯಲ್ಲಿ ಪ್ರತ್ಯೇಕವಾಗಿ ವಾಸವಾಗಿರಲು ಸೌಲಭ್ಯ ಹೊಂದಿರುವವರು ಹೋಂ ಐಸೊಲೇಷನ್‌ಗೆ ಒಳಗಾಗುವಂತೆ ಆರೋಗ್ಯ ಇಲಾಖೆ ಸಲಹೆ ನೀಡುತ್ತಿದ್ದು, 779 ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದು, ಸಮುದಾಯದ ಮಟ್ಟದಲ್ಲಿ ಹರಡುತ್ತಿರುವುದು ಕಂಡುಬರುತ್ತಿದೆ. ಜತೆಗೆ ಸಾವಿನ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಒಬ್ಬರು ಸಾವು:

ಉಡುಪಿ ತಾಲ್ಲೂಕಿನ ಯಲ್ಲೂರಿನ 54 ವರ್ಷದ ಕೊರೊನಾ ಸೋಂಕಿತ ವ್ಯಕ್ತಿ ಭಾನುವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತರ ಸಾವಿನ ಸಂಖ್ಯೆ 36ಕ್ಕೇರಿಕೆಯಾಗಿದೆ.

977 ಮಾದರಿ ಸಂಗ್ರಹ:

ಸೋಂಕಿತರ ಪ್ರಾಥಮಿಕ ಸಂಪರ್ಕ ಹಾಗೂ ಐಎಲ್‌ಐ, ಸಾರಿ ಲಕ್ಷಣಗಳು ಕಂಡುಬಂದ 977 ಜನರ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 616 ವರದಿಗಳು ಬರುವುದು ಬಾಕಿ ಇದೆ. ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ 29 ಮಂದಿಗೆ ಐಸೊಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಭಾನುವಾರ 78 ಸೇರಿ 2696 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1,943 ಸಕ್ರಿಯ ಸೋಂಕಿತ ಪ್ರಕರಣಗಳು ಇವೆ. ಸೋಂಕಿತರ ಸಂಖ್ಯೆ 4,674ಕ್ಕೇರಿಕೆಯಾಗಿದೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT