ಉಡುಪಿ: 17 ಮಂದಿಗೆ ಕೋವಿಡ್
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಾಗಿದ್ದು ಮಂಗಳವಾರ 17 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಉಡುಪಿ ತಾಲ್ಲೂಕಿನ 13, ಕುಂದಾಪುರದ 1 ಹಾಗೂ ಕಾರ್ಕಳದ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 15 ಮಂದಿಯಲ್ಲಿ ಸೋಂಕಿನ ಲಕ್ಷಣಗಳಿದ್ದು, ಇಬ್ಬರಲ್ಲಿ ಲಕ್ಷಣಗಳು ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
14 ಪುರುಷರಲ್ಲಿ ಹಾಗೂ ಮೂವರು ಮಹಿಳೆಯರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 15 ಮಂದಿ ಹೋಂ ಐಸೊಲೇಷನ್‌ನಲ್ಲಿ ಹಾಗೂ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 26 ಸಕ್ರಿಯ ಸೋಂಕಿತರು ಇದ್ದಾರೆ.
ಕೆಲವು ತಿಂಗಳುಗಳಿಂದ ಉಡುಪಿಯಲ್ಲಿ ಸೋಂಕು ಇಳಿಮುಖವಾಗಿತ್ತು. ಇದೀಗ ಏಕಾಏಕಿ ಹೆಚ್ಚಾಗುತ್ತಿರುವುದು ಆತಂಕ ಮೂಡಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.