15 ಮಂದಿಗೆ ಕೋವಿಡ್; 191 ಸಕ್ರಿಯ ಸೋಂಕಿತರು ಮಾತ್ರ
ಉಡುಪಿ: ಕುಸಿದ ಸೋಂಕಿತರ ಪ್ರಮಾಣ
ಉಡುಪಿ: ಜಿಲ್ಲೆಯಲ್ಲಿ ಬುಧವಾರ 15 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, ಉಡುಪಿಯ 9, ಕುಂದಾಪುರದ ಇಬ್ಬರು, ಕಾರ್ಕಳದ ಓರ್ವ ಹಾಗೂ ಇತರೆ ಜಿಲ್ಲೆಗಳ ಮೂವರಿಗೆ ಸೋಂಕು ತಗುಲಿದೆ.
9 ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ 6 ಮಂದಿ ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ 21 ಮಂದಿ ಸೇರಿ 22,341 ಸೋಂಕಿತರು ಇದುವರೆಗೂ ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತ ಪ್ರಕರಣಗಳು 22,719 ಇದ್ದು, 191 ಸಕ್ರಿಯ ಸೋಂಕಿತರು ಇದ್ದಾರೆ. 187 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.