ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ನಿಷ್ಕಾಳಜಿ ಅಪಾಯಕಾರಿ: ಶಾಸಕ ಸುಕುಮಾರ ಶೆಟ್ಟಿ

ಕೋವಿಡ್ ತಡೆ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ
Last Updated 13 ಜುಲೈ 2021, 3:54 IST
ಅಕ್ಷರ ಗಾತ್ರ

ಬೈಂದೂರು: ‘ವಿದೇಶಗಳಲ್ಲಿ ಕೋವಿಡ್ ಮೂರನೇ ಅಲೆ ಕಾಣಿಸಿಕೊಂಡಿದ್ದು, ದೊಡ್ಡಸಂಖ್ಯೆಯಲ್ಲಿ ಜನರು ಸೋಂಕಿಗೆ ಒಳಗಾಗುತ್ತಿದ್ದಾರೆ. ಮರಣ ಪ್ರಮಾಣವೂ ಏರುಗತಿಯಲ್ಲಿದೆ. ನಮ್ಮಲ್ಲೂ ಸಾರ್ವಜನಿಕರ ನಿಷ್ಕಾಳಜಿ ಅಪಾಯ ತಂದೊಡ್ಡುವ ಸಾಧ್ಯತೆಯಿದೆ’ ಎಂದು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದರು.

ಶಿರೂರು ವೆಂಕಟರಮಣ ಸಭಾಗೃಹದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಎಂಡೋಸಲ್ಫಾನ್ ಸಂತ್ರಸ್ತ ಕುಟುಂಬದವರು, ಅಂಗವಿಕಲರು ಮತ್ತು ಅವರ ಆರೈಕೆದಾರರಿಗೆ ಸಂಸದ ಬಿ. ವೈ. ರಾಘವೇಂದ್ರ ನೇತೃತ್ವ, ಶಾಸಕರ ಸಹಭಾಗಿತ್ವ ಮತ್ತು ಕರ್ನಾಟಕ ಸೇವಾ ಭಾರತಿ, ಶಿವಮೊಗ್ಗದ ಪ್ರೇರಣಾ ಟ್ರಸ್ಟ್, ಪಿಇಎಸ್ ಮತ್ತು ಜಿಲ್ಲಾ ಆರೋಗ್ಯ ಇಲಾಖೆ ಸಹಯೋಗದಲ್ಲಿ ಸೋಮವಾರ ಆರಂಭವಾದ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಜೇಶ್ವರಿ, ಡಿಎನ್‌ಎ ವ್ಯವಸ್ಥಾಪಕಿ ರೂಪಾಲಕ್ಷ್ಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಟಿ. ಶಂಕರ ಪೂಜಾರಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ, ಶಿರೂರು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಹನಾ ಇದ್ದರು.

ಸೇವಾ ಭಾರತಿ ತಾಲ್ಲೂಕು ಪ್ರಮುಖ ಪ್ರಸನ್ನಕುಮಾರ್ ಉಪ್ಪುಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ತುಳಸಿದಾಸ್ ಮೊಗೇರ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT