ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ ತಲುಪಿದ 12 ಸಾವಿರ ‘ಕೋವಿಶೀಲ್ಡ್’ ಲಸಿಕೆ

Last Updated 14 ಜನವರಿ 2021, 7:49 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಗೆ ಮೊದಲ ಹಂತದಲ್ಲಿ 12 ಸಾವಿರ ಕೋವಿಶೀಲ್ಡ್ ಲಸಿಕೆಗಳು ಬಂದಿವೆ. ಗುರುವಾರ ಡಿಎಚ್‌ಒ ಕಚೇರಿಗೆ ಕೋವಿಡ್ ಲಸಿಕೆಗಳನ್ನು ಹೊತ್ತುತಂದ ವಾಹನಕ್ಕೆ ಜಾಗಟೆ ಗಂಟೆ ಬಾರಿಸಿ ಸ್ವಾಗತ ಕೋರಲಾಯಿತು. ಬಳಿಕ ಲಸಿಕೆಗಳನ್ನು ಭದ್ರತೆಯಲ್ಲಿ ಗೋದಾಮಿಗೆ ಸಾಗಿಸಲಾಯಿತು.

ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಮೊದಲ ಹಂತದಲ್ಲಿ 22,230 ಖಾಸಗಿ ಹಾಗೂ ಸರ್ಕಾರಿ ಆರೋಗ್ಯ ಇಲಾಖೆಯ ಸಿಬ್ಬಂದಿ ಲಸಿಕೆಗೆ ನೋಂದಣಿ ಮಾಡಿಸಿಕೊಂಡಿದ್ದು, ಮೊದಲ ಹಂತದಲ್ಲಿ 12,000 ಲಸಿಕೆಗಳು ಬಂದಿವೆ. ಜ.16ರಂದು ಪ್ರಧಾನಿ ಮೋದಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಬಳಿಕ ಜಿಲ್ಲೆಯಲ್ಲಿ ಲಸಿಕೆ ಹಾಕುವ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. 16ರಂದು 6 ಲಸಿಕಾ ಕೇಂದ್ರಗಳಲ್ಲಿ 600 ಮಂದಿಗೆ ಲಸಿಕೆ ಹಾಕಲಾಗುವುದು. ಬಳಿಕ 94 ಲಸಿಕಾ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡ ಎಲ್ಲ ಸಿಬ್ಬಂದಿಗೂ ಲಸಿಕೆ ಹಾಕಲಾಗುವುದು ಎಂದು ಮಾಹಿತಿ ನೀಡಿದರು.

ಎರಡನೇ ಹಂತದಲ್ಲಿ ಕಂದಾಯ, ಪೊಲೀಸ್ ಹಾಗೂ ನಗರಾಭಿವೃದ್ಧಿ ಇಲಾಖೆಯ ಸಿಬ್ಬಂದಿಗೆ ಹಾಗೂ ಮೂರನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗುವುದು. ಒಬ್ಬರಿಗೆ ಎರಡು ಡೋಸ್ ಲಸಿಕೆ ಹಾಕಲಾಗುವುದು. ಜಿಲ್ಲೆಯಲ್ಲಿ ಯಾರೂ ಲಸಿಕೆ ಹಾಕಿಸಿಕೊಳ್ಳಲು ಯಾರೂ ಹಿಂದೇಟು ಹಾಕಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT