ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಷದ ಮಗು ಸೇರಿ 90 ಮಂದಿಗೆ ಕೋವಿಡ್‌

ಹೆಚ್ಚುತ್ತಿರುವ ಐಎಲ್‌ಐ ಹಾಗೂ ಸಾರಿ ಪ್ರಕರಣ
Last Updated 11 ಜುಲೈ 2020, 16:11 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಶನಿವಾರ ದಿಢೀರ್ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಒಂದೇ ದಿನ 90 ಮಂದಿಯಲ್ಲಿ ಕೋವಿಡ್‌–19 ದೃಢಪಟ್ಟಿದೆ.

‌ಉಡುಪಿ ಹಾಗೂ ಕಾಪು ತಾಲ್ಲೂಕಿನ 66, ಕುಂದಾಪುರದ 20, ಕಾರ್ಕಳದ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರಲ್ಲಿ 49 ಪುರುಷರು, 26 ಮಹಿಳೆಯರು, ಒಂದು ವರ್ಷದ ಮಗೂ ಸೇರಿ 15 ಮಕ್ಕಳು ಇದ್ದಾರೆ.

ಮುಂಬೈನಿಂದ ಜಿಲ್ಲೆಗೆ ಬಂದಿದ್ದ 8 ಮಂದಿಯಲ್ಲಿ, ಬೆಂಗಳೂರಿನಿಂದ ಬಂದಿದ್ದ ಐವರು, ಮಂಗಳೂರು ಹಾಗೂ ರಾಯಚೂರು ಪ್ರಯಾಣ ಬೆಳೆಸಿದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಉಳಿದ 75 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿದೆ. ಎಲ್ಲರನ್ನೂ ಕೋವಿಡ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಐಎಲ್‌ಐ ಲಕ್ಷಣಗಳಿರುವ 17 ಜನರಲ್ಲಿ ಹಾಗೂ ತೀವ್ರ ಉಸಿರಾಟದ ಸಮಸ್ಯೆ ಇರುವ ಮೂವರಲ್ಲಿ ಕೋವಿಡ್‌ ಕಾಣಿಸಿಕೊಂಡಿದೆ. 23 ಜನರ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.‌

ಶನಿವಾರ ಸೋಂಕಿನ ಲಕ್ಷಣಗಳು ಕಂಡುಬಂದ 22 ಮಂದಿಯನ್ನು ಐಸೊಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದ 269 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 2,030 ವರದಿಗಳು ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,567ಕ್ಕೇರಿಕೆಯಾಗಿದ್ದು, ಶನಿವಾರ 23 ಸೇರಿ 1,245 ರೋಗಿಗಳು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 319 ಸಕ್ರಿಯ ಪ್ರಕರಣಗಳು ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT