ಮಂಗಳವಾರ, 28 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಸಾಗಾಟ ತಡೆದವರ ಮೇಲೆ ಹಲ್ಲೆ: ಪೇಜಾವರ ಸ್ವಾಮೀಜಿ ಖಂಡನೆ

Last Updated 1 ಡಿಸೆಂಬರ್ 2021, 15:47 IST
ಅಕ್ಷರ ಗಾತ್ರ

ಉಡುಪಿ: ತೀರ್ಥಹಳ್ಳಿಯ ಬೆಜ್ಜವಳ್ಳಿ ಸಮೀಪ ಅಕ್ರಮ ಗೋಸಾಗಾಟ ತಡೆಯಲು ಯತ್ನಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ವಾಹನ ಚಲಾಯಿಸಿ, ಮಾರಣಾಂತಿಕ ದುಷ್ಕೃತ್ಯ ನಡೆಸಿರುವ ಘಟನೆ ದಿಗ್ಭ್ರಮೆ ಮೂಡಿಸಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಗೋರಕ್ಷಕರ ಮೇಲಿನ ಹಲ್ಲೆ ಖಂಡನೀಯ. ಗೋರಕ್ಷಣೆಯ ಕಾರ್ಯಕ್ಕೆ ಸವಾಲೆಸೆಯುವ ದುರುಳರ ವಿರುದ್ಧ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕು. ಗೋಹತ್ಯಾ ನಿಷೇಧ ಕಾನೂನು ಜಾರಿಗೆ ತಂದೂ ಪ್ರಯೋಜನವಿಲ್ಲದಂತಾಗಿದ್ದು, ಕಾನೂನಿನ ಪರಿಣಾಮಕಾರಿ ಅನುಷ್ಠಾನವಾಗಬೇಕು. ಸರ್ಕಾರಗಳು ಇಚ್ಛಾಶಕ್ತಿ ತೋರಬೇಕು ಎಂದು ಶ್ರೀಗಳು ಒತ್ತಾಯಿಸಿದ್ದಾರೆ.

ಈಚೆಗೆ ಗೋಹತ್ಯೆ, ಗೋಸಾಗಾಟ ಮುಲಾಜಿಲ್ಲದೆ ನಡೆಯುತ್ತಿರುವುದು ತೀರಾ ಆತಂಕಕಾರಿ. ಗೋವಿನ ಸಂಕುಲ ಉಳಿಸಲು ಸಮಾಜ ಕಂಕಣಬದ್ಧರಾಗಬೇಕು. ಬೀಡಾಡಿ ದನಗಳನ್ನು ರಕ್ಷಿಸಲು ಸರ್ಕಾರ ತುರ್ತು ಕ್ರಮ ತೆಗೆದುಕೊಳ್ಳಬೇಕು. ಬೆಜ್ಜವಳ್ಳಿ ದುರ್ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಕಾರ್ಯಕರ್ತರು ಶೀಘ್ರ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವುದಾಗಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT