ಕಾರ್ಕಳ: ಕಾಲೇಜುಗಳು ಕೇವಲ ಪಠ್ಯದ ಪಾಠ ಮಾಡುವ ಸ್ಥಳವಾಗದೆ, ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಎತ್ತಿ ಹಿಡಿಯುವ ವೇದಿಕೆಗಳಾಗಬೇಕು ಎಂದು ಎಸ್.ಕೆ.ಎಫ್ ಎಲಿಕ್ಸರ್ ಇಂಡಿಯಾ ಮತ್ತು ಸಂಜೀವಿನಿ ಗೋಧಾಮ ಮುನಿಯಾಲಿನ ಸಂಸ್ಥಾಪಕ ಜಿ. ರಾಮಕೃಷ್ಣ ಆಚಾರ್ ಹೇಳಿದರು.

ತಾಲ್ಲೂಕಿನ ಕ್ರಿಯೇಟಿವ್ ಕಾಲೇಜಿನ ವಾರ್ಷಿಕೋತ್ಸವ ‘ಆವಿರ್ಭವ’ ಸಿಂಧೂರ ಸಂಭ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಾಸಕ ವಿ. ಸುನಿಲ್ ಕುಮಾರ್, ವಿಶ್ರಾಂತ ಪ್ರಾಚಾರ್ಯ ಕೆ. ಗುಣಪಾಲ್ ಕಡಂಬ, ನಟ ಶನಿಲ್ ಗೌತಮ್, ಮುಖ್ಯ ಅತಿಥಿ ವಿರೂಪಾಕ್ಷ ದೇವರಮನೆ ಮಾತನಾಡಿದರು.

ಕ್ರಿಯೇಟಿವ್ ಸಾಹಿತ್ಯ ಸಾಂಗತ್ಯ ಕಾರ್ಯಕ್ರಮದಲ್ಲಿ ಎಚ್. ಡುಂಡಿರಾಜ್ ಮಾತನಾಡಿ, ಯುವ ಮನಸ್ಸುಗಳ ಓದಿನ ಅಭ್ಯಾಸವೇ ಅವರ ಬದುಕಿನ ಶಕ್ತಿ ಕೇಂದ್ರ. ಪುಸ್ತಕವು ವ್ಯಕ್ತಿಯ ಚಿಂತನೆಗೆ ದಿಕ್ಕು ತೋರಿಸುವ ಗುರು ಎಂದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರು, 180 ಸಾಧಕರು, ಸಂಸ್ಥೆಯಲ್ಲಿ ಐದು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಬೋಧಕೇತರ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

‘ಕ್ರಿಯೇಟಿವ್ ಯಕ್ಷಾರಾಧನಮ್’ ಹವ್ಯಾಸಿ ಕಲಾವಿದರಿಂದ ‘ಶ್ರೀರಾಮಾನುಗ್ರಹ ಸಿಂಧೂರ ವಿಜಯ’ ಯಕ್ಷಗಾನ ಪ್ರದರ್ಶನ, ದಿ. ಎಚ್.ಎಸ್. ವೆಂಕಟೇಶಮೂರ್ತಿ ನೆನಪಿನ ಕುರಿತ ‘ಭಾವ ನಮನ’ ಭಾವಗೀತೆಗಳ ಗಾಯನ, ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆಯ ಅಂಗವಾಗಿ 150 ವಿದ್ಯಾರ್ಥಿಗಳಿಂದ ಗೀತಗಾಯನ, ಜಾದೂಗಾರ ಕುದ್ರೋಳಿ ಗಣೇಶ್ ಅವರಿಂದ ಮ್ಯಾಜಿಕ್ ಶೋ ಕಾರ್ಯಕ್ರಮ ನಡೆದವು. ಅವಿನಾಶ್ ಕಾಮತ್ ನಿರೂಪಿಸಿದರು.

ಸಮಾರೋಪ ಸಮಾರಂಭದಲ್ಲಿ ಪ್ರಾಚಾರ್ಯ ಗಣಪತಿ ಭಟ್ ವಾರ್ಷಿಕ ವರದಿ ವಾಚಿಸಿದರು. ಎಂ. ವೀರಪ್ಪ ಮೊಯಿಲಿ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಗಣಪತಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.